Ad Widget

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಸದಾನಂದ ಗೌಡ ಮಾವಜಿ ಅಧಿಕಾರ ಸ್ವೀಕಾರ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಸದಾನಂದ ಗೌಡ ಮಾವಜಿ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.

. . . . . . . . .


  ನಗರದ ಕಾಫಿ ಕೃಪಾ ಕಟ್ಟಡದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ರಿಜಿಸ್ಟ್ರಾರ್ ಚಿನ್ನಸ್ವಾಮಿ, ಸಿಬ್ಬಂದಿಗಳಾದ ಜ್ಯೋತಿ, ಶೋಭ ಇದ್ದರು.
ಸದಾನಂದಗೌಡ ಮಾವಜಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳ ತಾಲ್ಲೂಕಿನ ಮಂಡೆಕೋಲು ಗ್ರಾಮದ ಮಾವಜಿ  ಕುಟುಂಬದವರಾಗಿದ್ದಾರೆ.
  ಅಧಿಕಾರ ವಹಿಸಿಕೊಂಡ ಬಳಿಕ ನಗರದ ಜಿಲ್ಲಾಡಳಿತ ಭವನಕ್ಕೆ ತೆರಳಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರನ್ನು ಭೇಟಿ ಮಾಡಿ ಪರಿಚಯಿಸಿಕೊಂಡರು. ಈ ಸಂದರ್ಭದಲ್ಲಿ ಶಾಸಕರಾದ ಡಾ.ಮಂತರ್‍ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಕರ್ನಾಟಕ ಅರೆಭಾಷೆ ಸಂಸ್ಕoತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರಾದ ಸದಾನಂದ ಮಾವಜಿ ಅವರನ್ನು ಅಭಿನಂದಿಸಿದರು.
ಸುವರ್ಣ ಕರ್ನಾಟಕ ಸಮುಚ್ಚಯ ಭವನ ಶೀಘ್ರದಲ್ಲಿ ಪೂರ್ಣಗೊಳಿಸಿಕೊಡಬೇಕಾಗಿ ಶಾಸಕರು ಹಾಗೂ ಜಿಲ್ಲಾಧಿಕಾರಿ ಅವರಲ್ಲಿ ನೂತನ ಅಧ್ಯಕ್ಷರು ಮನವಿ ಮಾಡಿದರು.  
ಈ ಸಂದರ್ಭದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ಚಂದ್ರಶೇಖರ್ ಪೆರಾಲು, ರಿಜಿಸ್ಟ್ರಾರ್ ಚಿನ್ನಸ್ವಾಮಿ ಇದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading