

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತು ಚುನಾವಣೆ ನಡೆಯಿತು. ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿಯೇ ಈ ಚುನಾವಣೆ ನಡೆಸಲಾಯಿತು. ಮೊದಲಿಗೆ ಅಭ್ಯರ್ಥಿಗಳು ತಮ್ಮ ಬೆಂಬಲಿಗರ ಜೊತೆ ಶಾಲಾ ಗವರ್ನರ್ ಗೆ ನಾಮಪತ್ರ ಸಲ್ಲಿಸಿದರು. ಮರುದಿನ ನಾಮಪತ್ರ ಹಿಂಪಡೆಯಲು ಆವಕಾಶ ಕಲ್ಪಿಸಲಾಯಿತು. ನಂತರ ಅಭ್ಯರ್ಥಿಗಳು ತಮ್ಮ ಬೆಂಬಲಿಗರ ಜೊತೆ ಪ್ರಚಾರ ಕಾರ್ಯದಲ್ಲಿ ತೊಡಗಿದರು. ದಿನಾಂಕ 14-6-2024 ರಂದು ಪೂರ್ವಾಹ್ನ ದಿಂದ ಮತಗಟ್ಟೆ ಸಂಖ್ಯೆ 66ರಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮತಗಟ್ಟೆ ಅಧಿಕಾರಿಗಳಾಗಿ ಶಾಲಾ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿತ್ತು. ಶಾಲಾ ಮಕ್ಕಳು ಒಬ್ಬೊಬ್ಬರಾಗಿ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದರು. ನಂತರ ಮತ ಎಣಿಕೆ ಕಾರ್ಯ ಶಾಲಾ ಚುನಾವಣಾ ಅಧಿಕಾರಿ ಉದಯ ಕುಮಾರ್ ರೈ ಅವರ ಉಪಸ್ಥಿತಿಯಲ್ಲಿ ನಡೆಯಿತು. ಅಂತಿಮವಾಗಿ ವಿಜೇತ ಅಭ್ಯರ್ಥಿಯನ್ನು ಘೋಷಣೆ ಮಾಡಲಾಯಿತು. ಮುಖ್ಯಮಂತ್ರಿಯಾಗಿ 7ನೇ ತರಗತಿಯ ದೀಕ್ಷಿತ್, ಉಪ ಮುಖ್ಯಮಂತ್ರಿಯಾಗಿ ಪ್ರತೀಕ್ ಆಯ್ಕೆಯಾದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಸೆಕ್ಷನ್ 144 ಜಾರಿ ಮಾಡಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳು ಮತದಾನ ಮಾಡಿ ಖುಷಿ ಪಟ್ಟರು.