
ಸುಳ್ಯ ನಗರ ಕಡೆಯಿಂದ ಬರುತ್ತಿದ್ದ ಇನ್ನೋವಾ (ka 21 c 6554 ) ಹಳೆಗೇಟು ಪೆಟ್ರೋಲ್ ಪಂಪ್ ಬಳಿಯಲ್ಲಿ ಪೈಚಾರ್ ಕಡೆಯಿಂದ ಅತೀ ವೇಗವಾಗಿ ಬಂದ ಸ್ಪೆಂಡರ್ ಬೈಕ್ (ka 19 ef 3453) ಡಿಕ್ಕಿ ಹೊಡೆದ ಘಟನೆ ಇದೀಗ ನಡೆದಿದೆ. ಇನ್ನೋವದ ಮುಂಭಾಗ ಮತ್ತು ಬೈಕ್ ನಜ್ಜುಗುಜ್ಜಾಗಿದೆ. ಗಾಯಗೊಂಡ ಬೈಕ್ ಸವಾರರನ್ನು ಆಸ್ಪತ್ರೆ ಗೆ ಸೇರಿಸಲಾಗಿದೆ. ಅಪಘಾತದ ತೀವ್ರತೆಗೆ ಸವಾರ ಬೈಕ್ ನಿಂದ ಇನ್ನೋವದ ಮೇಲೆ ಬಿದ್ದು ಬಲ ಭುಜಕ್ಕೆ ಗಾಯಗಳಾಗಿದೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು, ವಾಹನ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಸಹಕರಿಸಿದ್ದಾರೆ.