Ad Widget

ಕೆ.ವಿ.ಜಿ ಆಯುರ್ವೇದ ಕಾಲೇಜು ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜಾಥಾ

ಕೆವಿಜಿ : ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ 10ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜನಜಾಗೃತಿ ಜಾಥಾವನ್ನು ದಿನಾಂಕ 19.06.2024 ಹಮ್ಮಿಕೊಳ್ಳಲಾಯಿತು. ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಪ್ರಮೋದ್ ಪಿ. ಎ., ಇವರ ಮಾರ್ಗದರ್ಶನದಲ್ಲಿ ಸಂಸ್ಥೆಯ ಎನ್.ಎಸ್.ಎಸ್. ವಿದ್ಯಾರ್ಥಿಗಳು ಜನಜಾಗೃತಿ ಜಾಥಾವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ...

ತಾ. ಪಂ. ಸಾಮಾನ್ಯ ಸಭೆ – ಬೆಳೆಯುತ್ತಿರುವ ಸುಳ್ಯದಲ್ಲಿ ವ್ಯವಸ್ಥಿತ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಆದ್ಯತೆ – ಉದಯ ಶೆಟ್ಟಿ

ತಾಲೂಕು ಪಂಚಾಯತ್ ಸಾಮಾನ್ಯ ಸಭೆಯು ಜೂ.19 ರಂದು ನಡೆಯಿತು. ತಾಲೂಕು ಪಂಚಾಯತ್ ಆಡಳಿತಾಧಿಕಾರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಉದಯ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.ಸುಳ್ಯ ನಗರದ ತ್ಯಾಜ್ಯ ವಿಲೇವಾರಿಗೆ ನಗರ ಹಾಗೂ ಸುತ್ತಮುತ್ತಲ ಗ್ರಾಮ ವ್ಯಾಪ್ತಿಯಲ್ಲಿ ಜಾಗ ಗುರುತಿಸುವ ಕುರಿತು ಕಳೆದ ಸಭೆಯ ಪಾಲನಾ ವರದಿ ವಿಚಾರ ಸಭೆಯಲ್ಲಿ ಪ್ರಸ್ತಾಪವಾದಾಗ, ವಿವರ ನೀಡಿದ ಮುಖ್ಯಾಧಿಕಾರಿಗಳು...
Ad Widget

ಸುಳ್ಯ : ತಾ.ಪಂ. ಸಾಮಾನ್ಯ ಸಭೆ – ಸ್ವಚ್ಛ ಭಾರತ್ ಮಿಷನ್ ಯೋಜನೆಯ ಅನುದಾನ ಸದ್ಭಳಕೆಗೆ ಜನತೆ ಹಾಗೂ ಅಧಿಕಾರಿಗಳು ಕೈ ಜೋಡಿಸಬೇಕು – ಉದಯ ಕುಮಾರ್ ಶೆಟ್ಟಿ

ಸುಳ್ಯ: ಸುಳ್ಯ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ನೇತೃತ್ವದಲ್ಲಿ ತಾಲೂಕು ಪಂಚಾಯತ್ ಸಾಮನ್ಯ ಸಭೆಯು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಬಳಿಕ ಪತ್ರಕರ್ತರ ಜೊತೆಗೆ ಮತನಾಡುತ್ತಾ ನಗರ ಪ್ರದೇಶಗಳಿಗೆ ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಆಡಳಿತದಿಂದ ಘನತ್ಯಾಜ್ಯ ನಿರ್ವಹಣೆಗೆ ಬೇಕಾಗುವ ಅನುದಾನವು ಸಿಗುತ್ತಿದ್ದು ಅದನ್ನು ಸದುಪಯೋಗ ಪಡಿಸಿಕೊಳ್ಳಲು ಸ್ಥಳದ ಅವಶ್ಯಕತೆ ಇದ್ದು ಅದನ್ನು ಮೊದಲು ಮಾಡಿಕೊಂಡು ಬೆಳೆಯುವ...

ಸಂಜೀವ ಮಡಿವಾಳ ಕೈವಲ್ತಡ್ಕ ನಿಧನ

ಐವರ್ನಾಡು ಗ್ರಾಮದ ಕೈವಲ್ತಡ್ಕ ಸಂಜೀವ ಮಡಿವಾಳರವರು ಜೂ.17 ರಂದು ನಿಧನರಾದರು. ಅವರಿಗೆ 79 ವರ್ಷ ಪ್ರಾಯವಾಗಿತ್ತು.ಮೃತರು ಪುತ್ರರಾದ ಜಗದೀಶ ಕೈವಲ್ತಡ್ಕ ಪುತ್ರಿಯರಾದ ಶ್ರೀಮತಿ ಲೀಲಾವತಿ ,ಶ್ರೀಮತಿ ಗೀತಾ ಹಾಗೂ ಅಳಿಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರನ್ನು ಅಗಲಿದ್ದಾರೆ.

ಸುಳ್ಯ : ಕಾಂತಮಂಗಲ ಕೊಲೆ ಪ್ರಕರಣ – ಎಡಮಂಗಲ ವ್ಯಕ್ತಿಯ ಬಂಧನ

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಸುಳ್ಯ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸಿದ್ದಾರೆ.  ಕಡಬ ತಾಲೂಕಿನ ಎಡಮಂಗಲದ ಉದಯ ಕುಮಾರ್ ನಾಯ್ಕ್ (35) ಬಂಧಿತ ಆರೋಪಿ. ರವಿವಾರ ರಾತ್ರಿ ವಿರಾಜಪೇಟೆಯ ವಸಂತ (45) ಎಂಬ ವ್ಯಕ್ತಿಯ ತಲೆಗೆ ಕಲ್ಲು ಎತ್ತಿ ಹಾಕಿ...

ಆಲೆಟ್ಟಿ : ಬಿಸಿ ನೀರು ಮೈಮೇಲೆ ಬಿದ್ದು ಚಿಕಿತ್ಸೆ ಪಡೆಯುತ್ತಿದ್ದ ಅವಿವಾಹಿತ ಯುವತಿ  ನಿಧನ

ಆಲೆಟ್ಟಿ ಗ್ರಾಮದ ಕುದ್ಕುಳಿ ಎಂಬಲ್ಲಿ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆಯಲ್ಲಿ ಆಕಸ್ಮತ್ತಾಗಿ ಜಾರಿ ಬಿದ್ದು ಮೈ ಮೇಲೆ ಬಿಸಿ  ನೀರು ಚೆಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಜೂ.17 ರಂದು ಮೃತ ಪಟ್ಟಿರುವ ಘಟನೆ ವರದಿಯಾಗಿದೆ.ಮೃತಪಟ್ಟ ಯುವತಿ ಆಲೆಟ್ಟಿಯ ಕುದ್ಕುಳಿ ದಿ.ಸುಬ್ರಾಯ ರವರ ಪುತ್ರಿ ಕು.ರೇಖಾ (35)ಎಂದು ತಿಳಿದು ಬಂದಿದೆ.ಕಳೆದ ಒಂದು...

ಪೊಲೀಸ್ ಠಾಣೆಯಲ್ಲಿ ನ್ಯಾಯ ಸಿಗುತ್ತಿಲ್ಲ : ಇನ್ನೂ ಮುಂದೆ ದೂರು ನೀಡುವುದಿಲ್ಲ, ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ವಿಶ್ವ ಹಿಂದೂ ಪರಿಷತ್, ಭಜರಂಗದಳದ ಕಾರ್ಯಕರ್ತರು

ಪೋಲೀಸ್ ಠಾಣೆಗೆ ನಮ್ಮ ಸಂಘಟನೆಯ ವತಿಯಿಂದ ನೀಡಿದ ದೂರುಗಳಿಗೆ, ನಾವು ನೀಡಿದ ಮಾಹಿತಿಗಳಿಗೆ ಸರಿಯಾದ ನ್ಯಾಯ ಸಿಗುತ್ತಿಲ್ಲ. ಇನ್ನು ನಾವು ಪೊಲೀಸರಿಗೆ ಮಾಹಿತಿ ನೀಡುವುದಿಲ್ಲ. ದೈವವೇ ನಮಗೆ‌ ನ್ಯಾಯ ಕೊಡಿಸಬೇಕು ಎಂದು ವಿಶ್ವ ಹಿಂದೂ ಪರಿಷತ್, ಭಜರಂಗದಳ ಸುಳ್ಯ ಪ್ರಖಂಡದ ಕಾರ್ಯಕರ್ತರು ಸುಳ್ಯ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.ಜೂ.19 ರಂದು ಬೆಳಗ್ಗೆ ಸುಳ್ಯದ ಕಲ್ಕುಡ ದೈವಸ್ಥಾನಕ್ಕೆ...

ಕೆ.ವಿ.ಜಿ.ಐ.ಟಿ.ಐ ಭಾಗಮಂಡಲದಲ್ಲಿ  ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮತ್ತು ಸನ್ಮಾನ ಸಮಾರಂಭ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ)ಸುಳ್ಯ ಕಮಿಟಿ “ಬಿ” ಇದರ ಆಡಳಿತದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆ.ವಿ.ಜಿ.ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ ಭಾಗಮಂಡಲದಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮತ್ತು ಹಿರಿಯ ವಿದ್ಯಾರ್ಥಿಗೆ ಸನ್ಮಾನ ಸಮಾರಂಭವು ಜೂ .15ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಮಾರಂಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ಮಾರ್ಟ್ ಕ್ಲಾಸ್‌ನ್ನು ಉದ್ಘಾಟಿಸಿದ ಅಕಾಡೆಮಿ ಆಫ್ ಲಿಬರಲ್ ಎಜ್ಯಕೇಶನ್(ರಿ) ಸುಳ್ಯ ಕಮಿಟಿ...

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ನೇರವಾಗಿ II ND  P.U.C SCIENCE, COMMERCE, ARTS, S.S.L.C, DMEd/NTT 2024-25 ತರಗತಿಗಳಿಗೆ ಅವಕಾಶ

ಪುತ್ತೂರು: 2023-24 ನೇ ಸಾಲಿನ 10 ನೇ ತರಗತಿಯಲ್ಲಿ ಶೇಕಡ 98, ಪಿಯುಸಿಯಲ್ಲಿ ಶೇಕಡ 100 ಫಲಿತಾಂಶವನ್ನು ನೀಡಿದ ಪ್ರಗತಿ ಎಜುಕೇಶನಲ್ ಫೌಂಡೇಶನ್ (ರಿ.) ಇದರ ಅಧೀನದಲ್ಲಿ ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಕಲಿಕೆಯಲ್ಲಿ ಹಿಂದುಳಿದು ಉತ್ತಮ ಅಂಕಗಳನ್ನು ಪಡೆದುಕೊಳ್ಳಬೇಕೆಂಬ ಆಕಾಂಕ್ಷೆಯ ವಿದ್ಯಾರ್ಥಿಗಳಿಗೆ ಮೌಲ್ಯಯುತವಾದ ಶಿಕ್ಷಣವನ್ನು ನೀಡುತ್ತಾ ಬಂದಿದ್ದು...

ಸವೇರಪುರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸಂಘದ ನಾಯಕಿಯಾಗಿ ಏಂಜಲ್ ಜೆ – ಉಪನಾಯಕರಾಗಿ ಲಾನಿಶ್ ರಿಶೋನ್ ಡಿಸೋಜಾ

ವಿದ್ಯಾರ್ಥಿಗಳಲ್ಲಿ ಚುನಾವಣಾ ಪ್ರಕ್ರಿಯೆಯ ಅರಿವು ಮೂಡಿಸುವ ನಿಟ್ಟಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಸತ್ತಿನ ಚುನಾವಣೆಯು ಮಂಗಳವಾರ ನಡೆಯಿತು. ಪ್ರಜಾಪ್ರಭುತ್ವದ ರೀತಿಯಲ್ಲಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ ಮತ್ತು ಚುನಾವಣಾ ಪ್ರಚಾರದೊಂದಿಗೆ ಮತದಾನವು ನಡೆಯಿತು. ಆಧುನಿಕ ತಂತ್ರಜ್ಞಾನದ ಮೂಲಕ ವಿದ್ಯಾರ್ಥಿಗಳು ಮತ ಚಲಾಯಿಸಿದರು. ವಿದ್ಯಾರ್ಥಿ ಸಂಘದ ನಾಯಕಿಯಾಗಿ 10ನೇ ತರಗತಿಯ ಏಂಜಲ್ ಜೆ ಹಾಗೂ ಉಪನಾಯಕರಾಗಿ...
Loading posts...

All posts loaded

No more posts

error: Content is protected !!