

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಇಂದು[ಜೂ.21] ವಿಶ್ವ ಯೋಗ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು. ವೇದಿಕೆಯಲ್ಲಿ ಶಾಲೆಯ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೋಗವನ್ನು ಪ್ರತಿದಿನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚುತ್ತದೆ ಎಂದು ಹೇಳಿದರು. ವಿದ್ಯಾರ್ಥಿಗಳಿಂದ ಯೋಗಾಸನ ಪ್ರದರ್ಶನ ನೆರವೇರಿತು. ಇದರ ನಿರ್ವಹಣೆಯನ್ನು ಗಣಿತ ಶಿಕ್ಷಕರಾದ ಉದಯಕುಮಾರ ರೈ ಎಸ್ ನಿರ್ವಹಿಸಿದರು. ಮುಖ್ಯ ಶಿಕ್ಷಕರಾದ ಯಶೋಧರ ಎನ್ ಸರ್ವರನ್ನು ಸ್ವಾಗತಿಸುದರೊಂದಿಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ಹರಿಪ್ರಸಾದ್ ರೈ ಜಿ ವಂದಿಸಿದರು. ಕಾರ್ಯಕ್ರಮವನ್ನು ಅರವಿಂದ ಕಾಯಾರ ನಿರೂಪಿಸಿದರು.