
ವಿಜಯ ಗ್ರಾಮಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು ವಿಜಯ ಗ್ರಾಮಾಭಿವೃದ್ಧಿ ಸಮಿತಿ ನಾಲ್ಕೂರು, ಬ್ಯಾಂಕ್ ಆಫ್ ಬರೋಡಾ, ಅರಣ್ಯ ಇಲಾಖೆ ಸುಬ್ರಹ್ಮಣ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ಇದರ ವತಿಯಿಂದ ಮೆಟ್ಟಿನಡ್ಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ಪೆನ್ಸಿಲ್ ಬಾಕ್ಸ್, ಸ್ಕೇಲ್ ಗಳನ್ನು ಹಾಗೂ ಗಿಡಗಳನ್ನು ವಿತರಿಸಲಾಯಿತು. ಈ ಪ್ರಯೋಜನವನ್ನು ಶಾಲೆಯ 20 ಮಕ್ಕಳು ಪಡೆದುಕೊಂಡರು.
ಅರಣ್ಯ ಇಲಾಖೆಯ ನಾಲ್ಕೂರು ಗಸ್ತಿನ ಅರಣ್ಯ ರಕ್ಷಕರಾದ ಧನಂಜಯ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ಮಕ್ಕಳಿಗೆ ಗಿಡಗಳನ್ನು ಹಸ್ತಾಂತರ ಮಾಡಿದರು. ಸಭಾಧ್ಯಕ್ಷತೆಯನ್ನು ವಿಜಯ ಗ್ರಾಮ ಸಮಿತಿಯ ಅಧ್ಯಕ್ಷ ಡಿ ಆರ್.ಉದಯಕುಮಾರ ವಹಿಸಿದ್ದರು. ವೇದಿಕೆಯಲ್ಲಿ ಶೌರ್ಯ ವಿಪತ್ತು ತಂಡದ ಸಂಯೋಜಕರಾದ ಸತೀಶ ಬಂಬುಳಿ, ಎಸ್‌ಡಿಎಂಸಿ ಅಧ್ಯಕ್ಷ ರವಿ ಗುಂಡಡ್ಕ ಶಾಲಾ ಮುಖ್ಯೋಪಾಧ್ಯಾಯರಾದ ಕುಶಾಲಪ್ಪ ಪಿ. ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ೩ ಹಣ್ಣಿನ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ವಿಜಯ ಗ್ರಾಮ ಸಮಿತಿಯ ಕಾರ್ಯದರ್ಶಿ ದಿನೇಶ್ ಹಾಲೆಮಜಲು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಮಕ್ಕಳ ಪೋಷಕರು, ಶಿಕ್ಷಕರು ಅಂಗನವಾಡಿ ಶಿಕ್ಷಕಿ ಕಮಲ, ಶಾಲಾ ಮಕ್ಕಳು ಉಪಸ್ಥಿತರಿದ್ದರು. ಶಾಲಾ ಗೌರವ ಶಿಕ್ಷಕಿ ಅಪೂರ್ವ ಕೊಲ್ಯ ನಿರೂಪಿಸಿದರು.