
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಯೋಗ ತರಬೇತಿ ನಡೆಯಿತು. ಯೋಗ ಶಿಕ್ಷಕಿ ಅಪರ್ಣಾ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿ ಯೋಗದ ಮಹತ್ವದ ಬಗ್ಗೆ ವಿವರಿಸಿದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ, ಉನ್ಯಾಸಕರುಗಳಾದ ವಿಜಿತಾ, ಮಂಜುಶ್ರೀ ಉಪಸ್ಥಿತರಿದ್ದರು. ಉಪನ್ಯಾಸಕ ಯೋಗೀಶ್ ಕಾರ್ಯಕ್ರಮ ನಿರ್ವಹಿಸಿದರು.
