Ad Widget

ಅಡ್ತಲೆ : ನಿವೃತ್ತ ಮುಖ್ಯಶಿಕ್ಷಕ ಮಾಧವ ಪಿ. ಪೂಜಾರಿಮನೆ ಅವರಿಗೆ ಬೀಳ್ಕೊಡುಗೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಅಡ್ತಲೆ ಇವುಗಳ ಸಹಭಾಗಿತ್ವದಲ್ಲಿ ಜೂ.22 ರಂದು ಅಡ್ತಲೆ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಪ್ರಭಾರ ಮುಖ್ಯ ಶಿಕ್ಷಕ ಮಾಧವ.ಪಿ ಇವರ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಲೋಹಿತ್.ಎಂ.ಎ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕರಾದ ಹೊನ್ನಪ್ಪ ಮಾಸ್ತರ್ ಅಡ್ತಲೆ ಅವರು  ಮಾಧವ.ಪಿ ಪೂಜಾರಿಮನೆ ದಂಪತಿಗಳನ್ನು ಸನ್ಮಾನಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ, ಉಪಾಧ್ಯಕ್ಷರಾದ ಶ್ರೀಮತಿ ಭವಾನಿ ಚಿಟ್ಟನ್ನೂರು, ಅರಂತೋಡು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸುಜಯ ಲೋಹಿತ್, ಪ್ರಭಾರ ಮುಖ್ಯೋಪಾಧ್ಯಾಯರಾದ ಮುಕುಂದ.ಡಿ, ಸಮೂಹ ಸಂಪನ್ಮೂಲ ವ್ಯಕ್ತಿ ಮಮತಾ.ಕೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೋಹನ್ ಅಡ್ತಲೆ,ಭವಾನಿಶಂಕರ ಅಡ್ತಲೆ ಹಾಗೂ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ಸುಜಾತ.ಪಿ ಹಾಗೂ ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಅಂಜಲಿ ಸ್ವಾಗತಿಸಿ,ತೃಪ್ತಿ ವಂದಿಸಿದರು. ಸುಜಾತ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading