
ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ 32 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಕೃಷ್ಣಮೂರ್ತಿ ಇವರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಎಸ್ಡಿಎಂಸಿ ವತಿಯಿಂದ ಅಭಿನಂದನೆ-ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಸಭಾಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ರಾವ್ ಯು ವಹಿಸಿದ್ದರು. ಶಾಲಾ ಹಿರಿಯ ವಿದ್ಯಾರ್ಥಿ ವಿದ್ವಾನ್ ಮೌನೇಶ್ ಶರ್ಮಾ ಅಭಿನಂದನಾ ಭಾಷಣ ಮಾಡಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ಶ್ರೀ ಪಿ ಜಿ ಎಸ್ ಎನ್ ಪ್ರಸಾದ್, ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಶಿಕ್ಷಣ ಸಂಯೋಜಕಿ ಶ್ರೀಮತಿ ಸಂಧ್ಯಾ, ಎಣ್ಮೂರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಜಯಂತ ಕೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪಾವನಾ ಜೋಗಿಬೆಟ್ಟು, ಸದಸ್ಯರಾದ ರವೀಂದ್ರ ರೈ ಟಪಾಲುಕಟ್ಟೆ, ಎಸ್ಡಿಎಂಸಿ ಅಧ್ಯಕ್ಷರಾದ ರುಕ್ಮಯ್ಯ ನಾಯ್ಕ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳು, ಹಿರಿಯ ವಿದ್ಯಾರ್ಥಿಗಳು, ಪ್ರೌಢ ಶಾಲಾ ಶಿಕ್ಷಕ ವೃಂದ, ಎಸ್ಡಿಎಂಸಿ ಸದಸ್ಯರು, ಪೋಷಕ ವೃಂದ, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲಾ ಮುಖ್ಯ ಗುರು ಉದಯ ಕುಮಾರ್ ರೈ ಎಸ್ ಸ್ವಾಗತಿಸಿದರು, ಶಾಲಾ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕಿ ಪ್ರೇಮಲತಾ ಧನ್ಯವಾದ ಅರ್ಪಿಸಿದರು. ಶಿಕ್ಷಕಿ ಶುಭಾ ಡಿ ಕಾರ್ಯಕ್ರಮ ನಿರೂಪಿಸಿದರು.