
ರಾಜ್ಯ ಸರಕಾರವು ಅಭಿವೃದ್ಧಿಯಲ್ಲಿ ಹಿಂದೆ ಉಳಿದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಪತ್ರಕರ್ತರ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಭಿವೃದ್ದಿಯನ್ನು ಮರೆತಿದೆ. ನೀರಾವರಿ ಯೋಜನೆಗಳು ಸ್ಥಗಿತಗೊಂಡಿದೆ ಎಂದು ಆರೊಪಿಸಿದರು.
ಬಿಜೆಪಿ ಮುಂದೆ ಅಂಕಿ ಅಂಶಗಳನ್ನು ಇಟ್ಟುಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಅಭಿವೃದ್ಧಿ ಒತ್ತಾಯಿಸಿ ಹೋರಾಟ ನಡೆಸಲಿದೆ ಎಂದರು.
ಮುಂದಿನ ಎಲ್ಲಾ ಚುನಾವಣೆಯಲ್ಲೂ ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆಯಿಂದ ಮುಂದುವರಿಯಲಿದೆ ಎಂದು ಹೇಳಿದರು.