
ಸುಳ್ಯ: ಸುಳ್ಯ ಮಂಡಲ ಬಿಜೆಪಿ ನೂತನ ಕಛೇರಿಯು ಸುಳ್ಯ ಕೆವಿಜಿ ಆಯುರ್ವೇದ ಆಸ್ಪತ್ರೆಯ ಬಳಿ ನಿರ್ಮಾಣಗೊಂಡಿದ್ದು , ಇದೀಗ ಕಛೇರಿಯನ್ನು ಬಿಜೆಪಿ ಹಿರಿಯ ನಾಯಕ ಕೇಂದ್ರಿಯ ಸಂಸದೀಯ ಮಂಡಳಿ ಸದಸ್ಯರಾದ ಬಿ ಎಸ್ ಯಡಿಯೂರಪ್ಪ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ , ಎಸ್ ಅಂಗಾರ , ಸತೀಶ್ ಕುಂಪಲ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಉಪಸ್ಥಿತಿಯಲ್ಲಿ ಉದ್ಘಾಟನೆ ನಡೆಯಿತು.