ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ
ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ & ಪ್ರೌಢಶಾಲೆಗಳಿಗೆ ಜೂ.27 ಗುರುವಾರದಂದು ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ನಾಳೆ (ಜೂ.27) ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ.