Ad Widget

ಕೊಲ್ಲಮೊಗ್ರ : ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ


           
ಜೂ.26ನೇ ಬುಧವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಸುಳ್ಯ ತಾಲೂಕು ಕೊಲ್ಲಮೊಗ್ರು ಒಕ್ಕೂಟಗಳ ವತಿಯಿಂದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನೆರವೇರಿತು. ಈ  ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಕೊಲ್ಲಮೊಗ್ರು –  ಒಕ್ಕೂಟದ ಅಧ್ಯಕ್ಷರು ಹಾಗೂ  ವಲಯಾಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ ಇವರು ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಕಮಲ.ಎ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಸುಬ್ರಹ್ಮಣ್ಯ ವಲಯದ ಉಪ ಅರಣ್ಯ ನಿರೀಕ್ಷಕರಾದ ಸದಾನಂದ ಇವರು ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಅರಣ್ಯರಕ್ಷಕರಾದ ಅಶೋಕ್, ಜನಜಾಗೃತಿ ವಲಯದ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯತ್ ಸದಸ್ಯರಾದ ಮಾಧವ ಚಾಂತಾಳ, ಸುಳ್ಯ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಸತೀಶ್ ಟಿ.ಎನ್.  ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರಾದ ಮೋಹಿನಿ ಕಟ್ಟ, ಬಿ ಒಕ್ಕೂಟದ ಉಪಾಧ್ಯಕ್ಷರಾದ ಚಂದ್ರಶೇಖರ್ ಕೋನಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸೇವಾಪ್ರತಿನಿಧಿ ಸಾವಿತ್ರಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕೃಷಿ ಅಧಿಕಾರಿ ರಮೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ  ಪರಿಸರ ಗೀತೆ, ಭಾಷಣ, ಪ್ರಬಂಧ ಮತ್ತು ಎಲೆಗಳನ್ನು ಗುರುತಿಸುವ ಸ್ಪರ್ಧೆಗಳನ್ನು ಏರ್ಪಡಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಮಕ್ಕಳಿಗೆ ಯೋಜನೆ ವತಿಯಿಂದ ಬಹುಮಾನ ನೀಡಿ ಸಿಹಿ ಹಂಚಲಾಯಿತು.
ಮುಖ್ಯೋಪಾಧ್ಯಾಯರು ವಂದಿಸಿದರು. ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಶಿರೂರು, ಪೋಷಕರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading