Ad Widget

ಜು.31 ರವರೆಗೆ ಹವಾಮಾನ ಆಧಾರಿತ ಬೆಳೆವಿಮೆ ನೋಂದಾವಣೆಗೆ ಅವಕಾಶ – ಹೆಚ್ಚಿನ ಮಾಹಿತಿ ಇವರನ್ನು ಸಂಪರ್ಕಿಸಿ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಮ್ಮ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2024-25 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಸದರಿ ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಾವಣೆಗೊಳ್ಳಬಹುದಾಗಿದ್ದು, ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ ಬ್ಯಾಂಕ್ ನಲ್ಲಿ ಹಾಗೂ ಬೆಳೆಸಾಲ ಹೊಂದಿಲ್ಲದ ರೈತರು ತಮ್ಮ ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ಗಳಲ್ಲಿ ಸದರಿ ಯೋಜನೆಯಡಿ ನೋಂದಾವಣೆಗೊಳ್ಳಬಹುದಾಗಿರುತ್ತದೆ ಹಾಗೂ ಸಾಮಾನ್ಯ ಸೇವಾ ಕೇಂದ್ರ (CSC) ಮತ್ತು ಗ್ರಾಮ ಒನ್ ಗಳ ಮೂಲಕವೂ ನೋಂದಾವಣೆಗೆ ಅವಕಾಶ ಕಲ್ಪಿಸಲಾಗಿದೆ, ಈ ಯೋಜನೆಯಡಿ ಅಡಿಕೆಗೆ ಎಕ್ರೆಗೆ ರೂ.2560 ಹಾಗೂ ಕಾಳುಮೆಣಸು ಎಕ್ರೆಗೆ ರೂ.940 ಆಗಿರುತ್ತದೆ. ಈ ಯೋಜನೆಯಡಿ ನೋಂದಾವಣೆಗೊಳ್ಳಲು 31.07.2024 ಅಂತಿಮ ದಿನಾಂಕವಾಗಿದ್ದು, ತುರ್ತಾಗಿ ರೈತರು ಸದರಿ ಯೋಜನೆಯಡಿ ನೋಂದಾವಣೆಗೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದರಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಮಾ ಸಂಸ್ಥೆಯಾಗಿ ಪ್ರಸಕ್ತ ಸಾಲಿಗೆ TATA AIG ಸಂಸ್ಥೆಯು ಆಯ್ಕೆಯಾಗಿದ್ದು, ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರತಿನಿಧಿ ಅಥವಾ ತೋಟಗಾರಿಕೆ ಇಲಾಖಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದ್ದು, ಸಂಪರ್ಕಿಸುವ ವಿವರ ಈ ಕೆಳಗಿನಂತಿದೆ.

ಮಂಜುನಾಥ ಡಿ., ತೋಟಗಾರಿಕೆ ಉಪನಿರ್ದೇಶಕರು, ಜಿ.ಪಂ., ದಕ್ಷಿಣ ಕನ್ನಡ 9448999226

ಶ್ರೀಮತಿ ಸುಹಾನ ಪಿ.ಕೆ., ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಸುಳ್ಯ 9880993238

ಅರಬಣ್ಣ ಪೂಜೇರಿ, ಸಹಾಯಕ ತೋಟಗಾರಿಕೆ ಅಧಿಕಾರಿ ಸುಳ್ಯ ಹೋಬಳಿ 9611248145


ಡಾ. ವಿಜೇತ್ ಎಸ್. ಸಹಾಯಕ ತೋಟಗಾರಿಕೆ ಅಧಿಕಾರಿ ಪಂಜ ಹೋಬಳಿ 7356842208


ಶುಭಂ, TATA AIG ಸಂಸ್ಥೆಯ ಪ್ರತಿನಿಧಿ 9131962255 ಇವರನ್ನು ಸಂಪರ್ಕಿಸಬಹುದು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!