ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಗ್ರಾಮಸಭೆಯು ಜೂ.29 ರಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ ಅವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು.
ಗ್ರಾ.ಪಂ ಉಪಾಧ್ಯಕ್ಷರಾದ ಜಯಂತ ಬಾಳುಗೋಡು ಹಾಗೂ ಸದಸ್ಯರಾದ ದಿವಾಕರ ಮುಂಡಾಜೆ, ಬಿಂದು.ಪಿ, ಶಿಲ್ಪಾ ಕೊತ್ನಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತೋಟಗಾರಿಕೆ ಇಲಾಖೆಯ ಅರಬಣ್ಣ ಪೂಜಾರ್ ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು.
ಗ್ರಾಮ ಸಭೆಯಲ್ಲಿ ರಸ್ತೆ, ಚರಂಡಿ ಹಾಗೂ ವಿದ್ಯುತ್ ಸಮಸ್ಯೆಯ ಬಗ್ಗೆ ಚರ್ಚೆ ನಡೆಯಿತು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರಿಯ ಕಲ್ಲೇಮಠ ವರದಿ ವಾಚನ ಮಾಡಿದರು.(ವರದಿ : ಉಲ್ಲಾಸ್ ಕಜ್ಜೋಡಿ)
- Saturday
- September 21st, 2024