Ad Widget

ಅಯ್ಯನಕಟ್ಟೆ: ನಮ್ಮ ಆರೋಗ್ಯಧಾಮ ವತಿಯಿಂದ ಶಾಲಾ ಮಕ್ಕಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಲೇಖನ ಸಾಮಗ್ರಿಗಳ ಕೊಡುಗೆ

ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್‌ನ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಯ್ಯನಕಟ್ಟೆ ಇಲ್ಲಿನ ೧೦೦ ಕ್ಕೂ ಹೆಚ್ಚಿನ ಮಕ್ಕಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಲೇಖನ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು. “ಗೋಕುಲ ಕಾಂಪ್ಲೆಕ್ಸ್” ಅಯ್ಯನಕಟ್ಟೆ ಇದರ ಮಾಲೀಕರಾದ ಶ್ರೀ ರಾಮಚಂದ್ರ ರಾವ್ ಹಾಗೂ “ನಮ್ಮ ಆರೋಗ್ಯಧಾಮ”- ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್‌ನ ವೈದ್ಯಾಧಿಕಾರಿ ಡಾ.ಕಿಶನ್ ರಾವ್ ಬಾಳಿಲ ಮತ್ತು ಸಿಬ್ಬಂದಿ ವರ್ಗದವರು ಸೇರಿ ಈ ಕೊಡುಗೆಗಳನ್ನು ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಮಕ್ಕಳಿಗೆ ಉತ್ತಮ ಆರೋಗ್ಯ ಹಾಗೂ ಶುಚಿತ್ವದ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!