- Sunday
- April 20th, 2025

ಸುಬ್ರಹ್ಮಣ್ಯ ಜೂನ್ 22 : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಇದರ ವತಿಯಿಂದ ಶನಿವಾರ ಕುಲ್ಕುಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು. ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಸುಬ್ರಹ್ಮಣ್ಯ ಇದರ ಅಧ್ಯಕ್ಷ ಡಾ| ರವಿ ಕಕ್ಕೆಪದವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುಸ್ತಕಗಳ ಪ್ರಾಯೋಜಕರಾದ...

ಕಾಂತಮಂಗಲ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಆರೋಗ್ಯ ಸಹಾಯಕಿ ಮಾಲಿನಿ ಅವರು ಯೋಗ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಸ್ವರ್ಣಲತಾ ಹಾಗೂ ಸಹಶಿಕ್ಷಕಿಯರು ಉಪಸ್ಥಿತರಿದ್ದರು.

ಮೂರನೇ ವರ್ಷದ ಕಂಡದ ಗೌಜಿ ಕೆಸರ್ದ ಪರ್ಬ ಕಾರ್ಯಕ್ರಮವೂ ಜುಲೈ 14 ರಂದು ಅಜ್ಜಾವರದ ಕೊರಂಗುಬೈಲು ಗದ್ದೆಯಲ್ಲಿ ನಡೆಯಲಿರುವುದು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಹಾಗೂ ಗದ್ದೆಯ ಮಾಲಕರಾದ ಬಾಲಕೃಷ್ಣ ನಾಯ್ಕ್, ಅಜ್ಜಾವರ ದಂಪತಿಗಳು ಗದ್ದೆಯ ಮುಹೂರ್ತ ಕಾರ್ಯವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಪ್ರತಾಪ ಯುವಕ ಮಂಡಲ ಅಜ್ಜಾವರ ಅಧ್ಯಕ್ಷರಾದ ಗುರುರಾಜ್ ಅಜ್ಜಾವರ, ಚೈತ್ರ ಯುವತಿ...

ಮಡಪ್ಪಾಡಿ ಗ್ರಾಮದ ಗೋಳ್ಯಾಡಿ ದಿ। ಕುಶಾಲಪ್ಪ ಎಂಬವರ ಪುತ್ರ ಗುರುಪ್ರಸಾದ್ ಎಂಬವರು ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ನಿಧನರಾದರು. ಅವರಿಗೆ 50 ವರ್ಷ ಪ್ರಾಯವಾಗಿತ್ತು. ಮೃತರು ತಾಯಿ, ಪತ್ನಿ, ಒಂದು ಗಂಡು, ಒಂದು ಹೆಣ್ಣು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ವಸ್ಥ ವ್ರತ ವಿಭಾಗದ ಅಸೋಸಿಯೇಟ್ ಪ್ರೊಪೆಸರ್ ಡಾ ಶಬೀನಾ ಟಿ ಟಿ ಅವರು ಆಗಮಿಸಿ ಮನಸ್ಸಿನ ಏಕಾಗ್ರತೆ, ಅರೋಗ್ಯವಂತರಾಗಿರಲು ಅನುಸರಿಸಬೇಕಾದ ಧ್ಯಾನ, ಮುದ್ರಗಳನ್ನು ತಿಳಿಸಿಕೊಟ್ಟರು.ಅಧ್ಯಕ್ಷತೆ ವಹಿಸಿದ್ದಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ ರೈ...

ಯೋಗ ದಿನಾಚರಣೆಯ ಅಂಗವಾಗಿ ಪುತ್ತೂರಿನ ನರಿಮೊಗರಿನಲ್ಲಿರುವ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯ ಯೋಗ ಹಾಲ್ ನಲ್ಲಿ "ಯೋಗ ಉತ್ಸವ " ಕಾರ್ಯಕ್ರಮ ನಡೆಯಿತು. ಅಂತಾರಾಷ್ಟ್ರೀಯ ಯೋಗಪಟು ಕು . ತೃಪ್ತಿ ಎನ್. ಇವರಿಂದ ಯೋಗಾಸನ ಪ್ರದರ್ಶನ ಪ್ರಾತ್ಯಕ್ಷಿಕೆ ನಡೆಯಿತು. ಆಸ್ಪತ್ರೆಯ ಆಡಳಿತ ನಿರ್ದೇಶಕ ಹಾಗೂ ಖ್ಯಾತ ಆಯುರ್ವೇದ ತಜ್ಞ ವೈದ್ಯ, ಆಯುರ್ವೇದ ವಾಚಸ್ಪತಿ ಡಾ ರಾಘವೇಂದ್ರ...

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಯೋಗ ತರಬೇತಿ ನಡೆಯಿತು. ಯೋಗ ಶಿಕ್ಷಕಿ ಅಪರ್ಣಾ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿ ಯೋಗದ ಮಹತ್ವದ ಬಗ್ಗೆ ವಿವರಿಸಿದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ, ಉನ್ಯಾಸಕರುಗಳಾದ ವಿಜಿತಾ, ಮಂಜುಶ್ರೀ ಉಪಸ್ಥಿತರಿದ್ದರು. ಉಪನ್ಯಾಸಕ ಯೋಗೀಶ್ ಕಾರ್ಯಕ್ರಮ ನಿರ್ವಹಿಸಿದರು.

ಕೆವಿಜಿ ಐಪಿಎಸ್ ಶಾಲೆಯಲ್ಲಿ ಜೂನ್ 21 ಅಂತರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಶಾಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಉಜ್ವಲ್ ಯು. ಜೆ ಶುಭ ಹಾರೈಸಿದರು. ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಭಾಸ್ಕರ್ ಬೆಳಗದ್ದೆ ಮುಖ್ಯ ಅತಿಥಿಯಾಗಿ, ಶಾಲಾ...

ಭರವಸೆ ನೀಡಿದಂತೆ ಹೊಸ ಬ್ಯಾಟರಿ ಒದಗಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟಸುಳ್ಯ ಸೀಮೆ ದೇವಸ್ಥಾನದ ತಾಣವಾದ ತೊಡಿಕಾನದ ಬಿ.ಎಸ್.ಎನ್.ಎಲ್. ಮೊಬೈಲ್ ಟವರಿಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರು ಭರವಸೆ ನೀಡಿದಂತೆ ಹೊಸ ಬ್ಯಾಟರಿಯನ್ನು ಒದಗಿಸಿದ್ದು, ಬ್ಯಾಟರಿ ಅಳವಡಿಸಲಾಗಿದೆ.ತೊಡಿಕಾನ ಗ್ರಾಮದಲ್ಲಿ ಬಿ.ಎಸ್.ಎನ್.ಎಲ್. ಮೊಬೈಲ್ ಟವರ್ ಮಾತ್ರವಿದ್ದು, ಇತ್ತೀಚಿನ ದಿನಗಳಲ್ಲಿ ನೆಟ್ವರ್ಕ್ ಸಮಸ್ಯೆ ತೀವ್ರವಾಗಿದ್ದು, ಈ ಕುರಿತಂತೆ ಸ್ಥಳೀಯ...

ಮಂಡೆಕೋಲು ಗ್ರಾಮ ಪಂಚಾಯತ್ ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕ ಮಂಡೆಕೋಲು ಇದರ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ ಮತ್ತು ವಿಪತ್ತು ನಿರ್ವಹಣಾ ವಾರ್ಷಿಕ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ಆಚರಿಸಲಾಯಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಹಾಗೂ ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು,ವೇದಿಕೆಯಲ್ಲಿ ಗ್ರಾಮ...

All posts loaded
No more posts