- Thursday
- April 3rd, 2025

https://youtu.be/lwYVo8S4pMs?si=fK7ylWkvHO7o5x-- ದ.ಕ.ಸಂಸದರಾಗಿ ಆಯ್ಕೆಯಾದ ಕ್ಯಾ.ಬ್ರಜೇಶ್ ಚೌಟರವರು ಇಂದು ಸುಳ್ಯಕ್ಕೆ ಭೇಟಿ ನೀಡಿದರು. ಪಕ್ಷದ ಕಛೇರಿಗೆ ಆಗಮಿಸಿದ ಅವರನ್ನು ಮಂಡಲ ಸಮಿತಿ ಹಾಗೂ ಪ್ರಮುಖ ನಾಯಕರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಎಸ್. ಅಂಗಾರ, ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರ.ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಪ್ರಮುಖರಾದ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ,...

ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯು 2020 ರಲ್ಲಿ ಪ್ರಸ್ತುತಪಡಿಸಿದ ‘ಸಾಹೇಬ್ರು ಬಂದವೇ’ ನಾಟಕದಲ್ಲಿ ಮೋನಿಕಾ ಪಾತ್ರದಲ್ಲಿ ಅಭಿನಯಿಸಿದ್ದ ಸುಸ್ಮಿತಾ ಅವರು ಶಿವಮೊಗ್ಗ ಜಿಲ್ಲೆಯ ಸಾಗರದ ನೀನಾಸಂ ರಂಗಶಿಕ್ಷಣ ತರಬೇತಿಗೆ ಪ್ರಸ್ತಕ( 2024-25) ಸಾಲಿಗೆ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರು ತಿಳಿಸಿದ್ದಾರೆ.ಪ್ರತಿಯೊಬ್ಬ...

ಗುತ್ತಿಗಾರು ಗ್ರಾಮದ ಪೈಕ ಮನೆ ದಿ.ಪೈಕ ಸುಬ್ಬಯ್ಯ ಗೌಡರ ಧರ್ಮಪತ್ನಿ ಸಾವಿತ್ರಿ ಇವರು ಜೂ. 30 ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ದಯಾನಂದ, ಹರಿಶ್ಚಂದ್ರ, ಪುತ್ರಿ ಭಾರತಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಸುಳ್ಯ ಶಾಲೆಯ ವಿದ್ಯಾರ್ಥಿಗಳಿಗೆ ಕೋಟೆ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಚಿತ ಬ್ಯಾಗ್ ವಿತರಣಾ ಕಾರ್ಯಕ್ರಮ ಇಂದು ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಿ ಕಣ್ಣಿನ ತಪಾಸಣೆ ಶಿಬಿರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ರೈಟ್ ಟು ಲಿವ್ ಕೋಟೆ ಫೌಂಡೇಶನ್ ನ ವೀರೇಶ್ ಸೊಂಡೆ,...

ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ , ಪರಿವೃತ್ತ ಪದ್ಮಸಾನ ದಲ್ಲಿ 01 ಗಂಟೆ 08 ನಿಮಿಷ 10 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ.ಇವರು ವಾಲ್ತಾಜೆ ಶ್ರೀ ಪ್ರಶಾಂತ್ ವಾಲ್ತಾಜೆ ಮತ್ತು ಶ್ರೀಮತಿ ಚೈತ್ರ ರವರ ಪುತ್ರಿ. ಅಮರ...

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 99 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನಾಗಿ ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿಯವರನ್ನು ಆಯ್ಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಆಲೆಟ್ಟಿ ಗ್ರಾಮ ಕಾಂಗ್ರೆಸ್ ಸಮಿತಿ ವತಿಯಿಂದ ಶ್ರೀ ಸದಾಶಿವ ದೇವಸ್ಥಾನ ನಾಗಪಟ್ಟಣ ಇಲ್ಲಿ ರಾಹುಲ್ ಗಾಂಧಿಯವರ ಹೆಸರಿನಲ್ಲಿ ಶಿವಪೂಜೆ ಹಾಗೂ...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ 2024-25 ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಮತ್ತು ಚಾರ್ಟರ್ ನೈಟ್ ಸಮಾರಂಭವು ಜುಲೈ 01 ಸೋಮವಾರದಂದು ಏನೇಕಲ್ಲು ಸಂತೃಪ್ತಿ ಕೃಷಿ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿರುವುದು.ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಡಿಸ್ಟ್ರಿಕ್ಟ್ 317ಡಿ ದ್ವಿತೀಯ ಉಪರಾಜ್ಯಪಾಲರಾದ ಹೆಚ್. ಎಂ. ತಾರಾನಾಥ್ ನೆರವೇರಿಸಿಕೊಡಲಿರುವರು. ಚಾರ್ಟರ್ ನೈಟ್ ಕಾರ್ಯಕ್ರಮವನ್ನು...

ಜೂ. 29ರಂದು ಸುಳ್ಯ ಸಿ ಎ ಬ್ಯಾಂಕ್ ಆಂತರಿಕ ಲೆಕ್ಕಪರಿಶೋಧಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಪ್ರಸಾದ್ ಎಸ್ ಇವರ ನಿವೃತ್ತಿ ಪ್ರಯುಕ್ತ ಬೀಳ್ಕೊಡುಗೆ ಕಾರ್ಯಕ್ರಮ ಸುಳ್ಯ ಸಿ ಎ ಬ್ಯಾಂಕ್ ನ ಶ್ರೀ ಎ ಎಸ್ ವಿಜಯಕುಮಾರ್ ಸಭಾಭವನದಲ್ಲಿ ಇಂದು ನಡೆಯಿತು. ಶಿವಪ್ರಸಾದ್ ಎಸ್ ಇವರು 1991 ರಲ್ಲಿ ಸಿ ಎ ಬ್ಯಾಂಕ್ ನಲ್ಲಿ ಗುಮಾಸ್ತನಾಗಿ ಸೇರ್ಪಡೆಗೊಂಡು...

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಗ್ರಾಮಸಭೆಯು ಜೂ.29 ರಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ ಅವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು.ಗ್ರಾ.ಪಂ ಉಪಾಧ್ಯಕ್ಷರಾದ ಜಯಂತ ಬಾಳುಗೋಡು ಹಾಗೂ ಸದಸ್ಯರಾದ ದಿವಾಕರ ಮುಂಡಾಜೆ, ಬಿಂದು.ಪಿ, ಶಿಲ್ಪಾ ಕೊತ್ನಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತೋಟಗಾರಿಕೆ ಇಲಾಖೆಯ ಅರಬಣ್ಣ ಪೂಜಾರ್ ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು.ಗ್ರಾಮ ಸಭೆಯಲ್ಲಿ ರಸ್ತೆ, ಚರಂಡಿ...

ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್‌ನ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಯ್ಯನಕಟ್ಟೆ ಇಲ್ಲಿನ ೧೦೦ ಕ್ಕೂ ಹೆಚ್ಚಿನ ಮಕ್ಕಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಲೇಖನ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು. “ಗೋಕುಲ ಕಾಂಪ್ಲೆಕ್ಸ್” ಅಯ್ಯನಕಟ್ಟೆ ಇದರ ಮಾಲೀಕರಾದ ಶ್ರೀ ರಾಮಚಂದ್ರ ರಾವ್ ಹಾಗೂ “ನಮ್ಮ ಆರೋಗ್ಯಧಾಮ”- ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್‌ನ...

All posts loaded
No more posts