ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.03 ರಂದು ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಕಾರ್ಯಕ್ರಮವನ್ನು ನಡೆಸಲಾಯಿತು. ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂದನೀಯ ಫಾ. ಪಾವ್ಲ್ ಕ್ರಾಸ್ತಾ ರವರು ವಹಿಸಿದರು. ಎಂಟನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನ್ವಿ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು. ತದನಂತರ ಶಾಲಾ ಸಂಚಾಲಕರು ದೀಪವನ್ನು ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಳಿಕ ಶಾಲಾ ಸಂಚಾಲಕರು ಶಾಲಾ ವಿದ್ಯಾರ್ಥಿ ನಾಯಕಿ, ಉಪನಾಯಕ ಹಾಗೂ ಎಲ್ಲಾ ವಿದ್ಯಾರ್ಥಿ ಸಂಸತ್ತಿನ ಸದಸ್ಯರುಗಳಿಗೆ sashes ಅನ್ನು ನೀಡುವುದರ ಮೂಲಕ ಪದವಿಯನ್ನು ಹಸ್ತಾಂತರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿ| ಅನಿತಾ ಫೆರ್ನಾಂಡಿಸ್ ರವರು ಪ್ರತಿಜ್ಞಾವಿಧಿಯನ್ನು ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಲಾ ಸಂಚಾಲಕರು ಶಾಲಾ ವಿದ್ಯಾರ್ಥಿ ಸಂಸತ್ತಿನ ಕೆಲಸ ಕಾರ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ರಝೀನ್ ವಂದನಾರ್ಪಣೆಗೈದರು. ಎಂಟನೇ ತರಗತಿ ವಿದ್ಯಾರ್ಥಿನಿ ಕೆ.ಎಂ. ನಿಹಾ ಫಾತೀಮ ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯಕ್ರಮದ ನಿರ್ವಹಣಾ ಜವಾಬ್ದಾರಿಯನ್ನೂ ಸಹ ಶಿಕ್ಷಕಿ ಶ್ರೀಮತಿ ರೂಪರವರು ವಹಿಸಿದ್ದರು ಮತ್ತು ಎಲ್ಲಾ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.