Ad Widget

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಂಯೋಜಕರಾಗಿ ಪ್ರದೀಪ್ ಕುಮಾರ್ ರೈ ಪಾಂಬಾರು ನೇಮಕ

ಕೆಪಿಸಿಸಿಯ ನಿರ್ದೇಶನದಂತೆ ಬ್ಲಾಕ್ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಕೆಪಿಸಿಸಿ ಕಾರ್ಯಕ್ರಮಗಳ ಅನುಷ್ಠಾನದ ಹಿನ್ನೆಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್‌ನ ಸಂಯೋಜಕರಾಗಿ ಪ್ರದೀಪ್ ಕುಮಾರ್ ರೈ ಪಾಂಬಾರು ಇವರನ್ನು ನೇಮಕಗೊಳಿಸಿ ಆದೇಶ ನೀಡಲಾಗಿದೆ. ಈ ಆದೇಶವನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ರವರ ನಿರ್ದೇಶನದಂತೆ ದ.ಕ ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್‌ರವರು ನೇಮಕ ಮಾಡಿರುತ್ತಾರೆ. ಬ್ಲಾಕ್ ಮಟ್ಟದಲ್ಲಿ ಮುಂಬರುವ ಸ್ಥಳೀಯಾಡಳಿತ ಚುನಾವಣೆಗೆ ಪಕ್ಷ ಬಲವರ್ಧನೆಗೆ ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಈ ನೇಮಕವನ್ನು ಮಾಡಲಾಗಿದೆ.

. . . . . . . . .

ಈ ಹಿಂದೆ ಎನ್‌ಎಸ್‌ಯುಐಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ಚುನಾಯಿತ ಸೆನೆಟ್ ಸದಸ್ಯರಾಗಿ, ರಾಜ್ಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಇಂಟೆಕ್‌ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಎಐಸಿಸಿ ಯಿಂದ ಕಾಸರಗೋಡು ಜಿಲ್ಲೆಯ ಉದುಮ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಯಾಗಿ, ಪ್ರಸ್ತುತ ಕೆಪಿಸಿಸಿಯ ಸಂಯೋಜಕರಾಗಿ ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಡಿಕೇರಿ ಬ್ಲಾಕ್ ಕಾಂಗ್ರೆಸ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್‌ನ ಉಸ್ತುವಾರಿಯಾಗಿ, ದ.ಕ ಜಿಲ್ಲೆಯ ಉಳ್ಳಾಲ ಬ್ಲಾಕ್ ಕಾಂಗ್ರೆಸ್‌ನ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ದ.ಕ ಜಿಲ್ಲಾ ಸೌಹಾರ್ದ ಸಮಿತಿಯ ಅಧ್ಯಕ್ಷರಾಗಿ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಹಿರಿಯ ಕಾಂಗ್ರೆಸ್ ಮುಖಂಡ ದಿ. ಪಾಂಬಾರು ಸುಬ್ಬಣ್ಣ ರೈಯವರ ಪುತ್ರರಾಗಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading