
ದ.ಕ.ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅಪಾಯಕಾರಿ ಸ್ಥಿತಿಯಲ್ಲಿರುವ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಮನೆ ಗಾಯ ತೂಗುಸೇತುವೆಯ ಸಂಚಾರ ನಿರ್ಬಂಧಿಸಲಾಗಿತ್ತು. ಇದರಿಂದ ಅಲ್ಲಿಯ ನಿವಾಸಿಗಳಿಗೆ ಸಮಸ್ಯೆಯಾಗಿದ್ದು, ಶಾಶ್ವತ ಪರ್ಯಾಯ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ರವರಿಗೆ ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಭವಾನಿ ಚಿಟ್ಟನ್ನೂರು, ಗ್ರಾ.ಪಂ. ಸದಸ್ಯ ವೆಂಕಟ್ರಮಣ ಪೆತ್ತಾಜೆ, ಮತ್ತು ಆರಂತೋಡು ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾದ ಸಂತೋಷ ಕುತ್ತಮೊಟ್ಟೆ ಉಪಸ್ಥಿತರಿದ್ದರು.
