ಬೆಂಗಳೂರಿನಿಂದ ಅಡೂರು ಕಡೆಗೆ ತೆರಳುತ್ತಿದ್ದ ಕಾರೊಂದು (ka51MO 2420)ಅರಂತೋಡು ಸಮೀಪದ ಬಿಳಿಯಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಚರಂಡಿ ಮೇಲೆ ಹತ್ತಿದ್ದು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರು ಗುದ್ದಿದ ರಭಸಕ್ಕೆ ಏರ್ ಬ್ಯಾಗ್ ತೆರೆದಿದ್ದರಿಂದ ಚಾಲಕ ಮತ್ತು ಸಹಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಬಲಭಾಗದ ಚಕ್ರವು ವಾಹನದಿಂದ ಕಳಚಿ ಬಿದ್ದಿದೆ. ವಾಹನ ಸವಾರರು ಅಡೂರು ಕಡೆಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.