10 ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಮತ್ತು ಎಸ್. ಜಿ.ಎಸ್ ಇಂಟರ್ನ್ಯಾಷನಲ್ ಯೋಗ ಫೌಂಡೇಶನ್ ಕಾಲೇಜು ಮತ್ತು ರಿಸರ್ಚ್ ಸೆಂಟರ್ ಇವರ ಜಂಟಿ ಆಶ್ರಯದಲ್ಲಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ನೆಹರು ಯುವ ಕೇಂದ್ರ ಕರ್ನಾಟಕ ಸರ್ಕಾರ ಇವರ ಸಹಕಾರದಲ್ಲಿ 14 ಜುಲಾಯಿ 2024ರಂದು ಬೆಂಗಳೂರಿನ ಕೋರಮಂಗಲ ಒಳಂಗಣ ಕ್ರೀಡಾoಗಣ ನಡೆದ ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿ 08 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಶೈನಿ. ಕೆ. ಕೆ ಪ್ರಥಮ ಸ್ಥಾನ
08 ರಿಂದ 12 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಜಿಶಾ. ಕೆ. ಕೆ, ತೃತೀಯ ಸ್ಥಾನ
ಇವರುಗಳು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರಿನ ಅಮರ ಯೋಗ ತರಬೇತಿ ಕೇಂದ್ರ ದ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ರವರಿಂದ ಯೋಗ ತರಬೇತಿ ಪಡೆಯುತ್ತಿದ್ದಾರೆ.
- Thursday
- November 21st, 2024