
ಸುಳ್ಯ ತಾಲೂಕಿನ ಎಲ್ಲಾ ಗಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳ ಸಭೆಯು ಜು.22 ರಂದು ಪೂ.10.30 ಕ್ಕೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಗ್ರಾ.ಪಂ.ಗಳ ಒಕ್ಕೂಟದ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಗೆ ಎಲ್ಲಾ ಅಧ್ಯಕ್ಷ,ಉಪಾಧ್ಯಕ್ಷರುಗಳು ಆಗಮಿಸಬೇಕೆಂದು ಗ್ರಾ.ಪಂ. ಸದಸ್ಯರ ಮಹಾ ಒಕ್ಕೂಟದ ಪ್ರ.ಕಾರ್ಯದರ್ಶಿ ಕೇಶವ ಅಡ್ತಲೆ ಹಾಗೂ ಸಂಚಾಲಕರಾದ ಮಹೇಶ್ ಭಟ್ ಕರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
