

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಕ್ ಆಫ್ ಬರೋಡಾ ಬೆಳ್ಳಾರೆ ಶಾಖೆಯ ವತಿಯಿಂದ ಬ್ಯಾಂಕಿನ 117ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಜು.20ರಂದು ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯ (CSR) ನಿಧಿಯಿಂದ ರೂ 10,000 ಮೌಲ್ಯದ (Ryak) ತೆರೆದ ಕಪಾಟನ್ನು ಕೊಡುಗೆಯಾಗಿ ನೀಡಿದರು. ಈ ಕೊಡುಗೆಯನ್ನು ಬೆಳ್ಳಾರೆ ಶಾಖೆಯ ಹಿರಿಯ ಅಧಿಕಾರಿಯಾಗಿರುವ ಶ್ರೀಮತಿ ಶುಭಶ್ರೀ ಅವರು ವಿದ್ಯಾಸಂಸ್ಥೆಯ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್ ರವರಿಗೆ ಹಸ್ತಾಂತರಿಸಿದರು. ಹಸ್ತಾಂತರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ರಾಧಾಕೃಷ್ಣ ರಾವ್ ಯು ವಹಿಸಿದ್ದರು. ಬಾಳಿಲ ಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ರೈ ಟಪಾಲುಕಟ್ಟೆ, ಬ್ಯಾಂಕಿನ ಸಿಬ್ಬಂದಿ ಶ್ರೀಮತಿ ವಿದ್ಯಾ ಉಪಸ್ಥಿತರಿದ್ದರು. ಶಾಲಾ ಮುಖ್ಯ ಗುರು ಉದಯಕುಮಾರ್ ರೈ ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.