ಕಾಂತಮಂಗಲದ ಜೀಜಾಬಾಯಿ ವೃತ್ತದ ಬಳಿಯಲ್ಲಿ ಚರಂಡಿ ಅವ್ಯವಸ್ಥೆಯಿಂದಾಗಿ ನೀರೆಲ್ಲಾ ರಸ್ತೆಯಲ್ಲಿ ಹರಿಯುವಂತಾಗಿದೆ. ಇಲ್ಲಿ ನಿರ್ಮಾಣ ಹಂತದಲ್ಲಿರುವ ಮರಾಠ ಕ್ಷತ್ರಿಯ ಸೇವಾ ಸಂಘದ ಕಟ್ಟಡ ನಿರ್ಮಾಣವಾಗುತ್ತಿದ್ದು ಚರಂಡಿಯನ್ನು ಮುಚ್ಚಲಾಗಿದೆ. ಇದರಿಂದ ನೀರೆಲ್ಲಾ ರಸ್ತೆಗೆ ಹರಿದು ಬರುತ್ತಿದ್ದು ಪಾದಚಾರಿಗಳು ಮತ್ತು ದ್ವಿಚಕ್ರ , ತ್ರಿಚಕ್ರ , ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ತಕ್ಷಣವೇ ಪಿಡಬ್ಲ್ಯೂಡಿ ಇಲಾಖೆ ಮತ್ತು ಗ್ರಾಮ ಪಂಚಾಯತ್ ಕ್ರಮ ಕೈಗೊಂಡು ನಾಗರಿಕರಿಗೆ ಆಗುತ್ತಿರುವ ತೊಂದರೆಗಳನ್ನು ತಪ್ಪಿಸಬೇಕಾಗಿದೆ.
- Thursday
- November 21st, 2024