
ಸೋಣಂಗೇರಿಯ ಸುತ್ತುಕೋಟೆ ಬಳಿ ಇಂದು ಬೆಳಿಗ್ಗೆ ಸ್ಕೂಟಿ ಹಾಗೂ ಬಸ್ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಟ್ಟ ಘಟನೆ ವರದಿಯಾಗಿದೆ.
ಮೃತಪಟ್ಟವರನ್ನು ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಪಿಗ್ಗಿ ಸಂಗ್ರಾಹಕರಾಗಿರುವ ರಾಮಚಂದ್ರ ಪ್ರಭು ಎಂದು ಗುರುತಿಸಲಾಗಿದೆ. ರಾಮಚಂದ್ರ ಪ್ರಭು ಅವರು ಸ್ಕೂಟಿಯಲ್ಲಿ ಸುಳ್ಯಕ್ಕೆ ಬರುತ್ತಿದ್ದ ವೇಳೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಸುತ್ತುಕೋಟೆ ಬಳಿ ಅಪಘಾತ ಸಂಭವಿಸಿ ರಾಮಚಂದ್ರ ಪ್ರಭುರ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ.