
ಏನೆಕಲ್ಲು ಗ್ರಾಮದ ದೇವರಹಳ್ಳಿ ದೊಡ್ಡಮನೆ ಲಿಂಗಪ್ಪ ಗೌಡ(ಜಯರಾಮ ಮಾಣಿಬೈಲು) ಎಂಬುವವರು ಇಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರಿಗೆ 64 ವರ್ಷ ವಯಸ್ಸಾಗಿತ್ತು.
ಇವರು ದೇವರಹಳ್ಳಿಯಲ್ಲಿ ಹೋಟೆಲ್ ಉದ್ಯಮವನ್ನು ನಡೆಸುತ್ತಿದ್ದರು. ಅಲ್ಲದೇ ಮಾಣಿಬೈಲು ಕುಟುಂಬದ ಊರಿನ ದೈವದ ಪೂಜಾರಿಯಾಗಿ ಸೇವೆ ಮಾಡಿದ್ದರು.
ಮೃತರು ಪತ್ನಿ, ಓರ್ವ ಪುತ್ರ, ಸಹೋದರ-ಸಹೋದರಿಯರು ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.