
ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, ಐ.ಪಿ.ಎಸ್ ರವರು ಜು.25 ರಂದು ಸುಳ್ಯ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಠಾಣಾ ಪರಿಸರದ ಸ್ವಚ್ಚತೆ, ಠಾಣಾ ದಾಖಲಾತಿ, ಕಡತಗಳ ನಿರ್ವಹಣೆಯ ಬಗ್ಗೆ ಪರಿಶೀಲಿಸಿದರು. ಬಳಿಕ ಠಾಣಾ ಅಧಿಕಾರಿ, ಸಿಬ್ಬಂದಿಗಳಿಗೆ ಬ್ರೀಫಿಂಗ್ ನಡೆಸಿ, ಠಾಣಾ ಕರ್ತವ್ಯಗಳ ಬಗ್ಗೆ ಸೂಕ್ತ ಸೂಚನೆಗಳನ್ನು ನೀಡಿದರು.
