Ad Widget

ಸುಬ್ರಹ್ಮಣ್ಯ : ಆ.02 ರಂದು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ, ತರಬೇತಿ, ಸಂವಾದ ಹಾಗೂ ಸನ್ಮಾನ ಕಾರ್ಯಕ್ರಮ

ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ವತಿಯಿಂದ ಆಗಸ್ಟ್ 02 ಶುಕ್ರವಾರದಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು, ಸುಬ್ರಹ್ಮಣ್ಯ ಇಲ್ಲಿ ಪತ್ರಿಕಾ ದಿನಾಚರಣೆ, ತರಬೇತಿ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ 11:00 ಗಂಟೆಯಿಂದ ಮದ್ಯಾಹ್ನ 1:00 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಪ್ರೊಬೇಷನರಿ ಐಎಎಸ್ ಅಧಿಕಾರಿಗಳಾದ ಶ್ರವಣ್ ಕುಮಾರ್ ಹಾಗೂ ಪ್ರೊಬೇಷನರಿ ಐಪಿಎಸ್ ಅಧಿಕಾರಿಗಳಾದ ಅಕ್ಷಯ್ ಪ್ರಕಾಶ್ಕರ್ ಉಪಸ್ಥಿತರಿರಲಿದ್ದಾರೆ.
ಅಪರಾಹ್ನ 1:30 ರಿಂದ ಪತ್ರಿಕಾ ದಿನಾಚರಣೆ ನಡೆಯಲಿದ್ದು, ಪುತ್ತೂರು ಸಹಾಯಕ ಆಯುಕ್ತರು ಹಾಗೂ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಗಳಾದ ಜುಬಿನ್ ಮೊಹಪಾತ್ರ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಅಧ್ಯಕ್ಷರಾದ ವಿಶ್ವನಾಥ ನಡುತೋಟ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ ನಾಯಕ್, ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎನ್.ಕೆ ನಾಗರಾಜ್ ಇವರು ಉಪಸ್ಥಿತರಿರಲಿದ್ದಾರೆ.
ಹಿರಿಯ ಪತ್ರಕರ್ತರು ಹಾಗೂ ಲೋಕಸಭೆಯ ಕನ್ಸಲ್ಟೆಂಟ್ ಇಂಟರ್ ಪ್ರಿಂಟರ್ ಆದ ಡಾ| ಗೋವಿಂದ.ಎನ್.ಎಸ್ ಇವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ನಂತರ ಸಮಾಜಮುಖಿ ವ್ಯಕ್ತಿತ್ವದ ಪತ್ರಕರ್ತರಾದ ಶಿವ ಭಟ್ ಕಾಂಚನ, ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರರು ಹಾಗೂ ಬರಹಗಾರರಾದ ಉಲ್ಲಾಸ್ ಕಜ್ಜೋಡಿ ಹಾಗೂ ಕಾಯಕ ರತ್ನ ರಾಜ್ಯ ಪ್ರಶಸ್ತಿ ವಿಜೇತರಾದ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸುಂದರ ಇವರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

. . . . . . . . .

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading