
ಮಡಪ್ಪಾಡಿ ಗ್ರಾಮ ಪಂಚಾಯತ್ 2023-24ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹಾಗೂ 15ನೇ ಹಣಕಾಸು ಯೋಜನೆಯ ಪ್ರಥಮ ಹಂತದ ಹಾಗೂ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯು ಆ.01ರಂದು ಮಡಪ್ಪಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶ್ರೀಮತಿ ಸುಹನಾ (ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕರು ತೋಟಗಾರಿಕೆ ಇಲಾಖೆ ಸುಳ್ಯ) ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅದಿಕಾರಿಯವರು, ಸಾಮಾಜಿಕ ಪರಿಶೋಧನೆಯ ತಾಲೂಕು ಸಂಯೋಜಕರಾದ ಶ್ರೀ ಚಂದ್ರಶೇಖರ ಹಾಗೂ ಗ್ರಾಮ ಸಂಪನ್ಮೂಲ ವ್ಯಕ್ತಿಗಳು, ಉದ್ಯೋಗ ಖಾತರಿ ಯೋಜನೆಯ ತಾಲೂಕು ಐಇಸಿ ತಾಲೂಕು ಸಂಯೋಜಕರು ಶ್ರೀಮತಿ ನಮಿತಾ,ಗ್ರಾಮಸ್ಥರು ಹಾಗೂ ಗ್ರಾ.ಪಂ ಸಿಬ್ಬಂದಿಗಳು ಹಾಜರಿದ್ದರು.