ಮಡಿಕೇರಿ ಆ.03(ಕ.ವಾ):-ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆಯಲ್ಲಿ ಉತ್ತಮ ಸಾಹಿತ್ಯ, ಸಂಗೀತ, ನಾಟಕ, ಜನಪದ ಕಲಾ ಪ್ರಕಾರಗಳಿಗಾಗಿ ಒಂದೇ ವೇದಿಕೆಯಲ್ಲಿ ಎಲ್ಲವರನ್ನು ಸೇರಿಸಿ ಸಾಹಿತ್ಯ, ಸಂಸ್ಕೃತಿಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಆಗಸ್ಟ್ 10 – 2024 ಶನಿವಾರ ದಂದು ಬೆಳಗ್ಗೆ 10 ಗಂಟೆಗೆ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮದುವೆಗದ್ದೆ ಶ್ರೀ ಬೋಜಪ್ಪ ಗೌಡ ಸಭಾಂಗಣದಲ್ಲಿ ಸಾಹಿತಿಗಳು, ಬರಹಗಾರರು ಮತ್ತು ಕಲಾವಿದರೊಂದಿಗೆ ‘ಸಂವಾದ ಕಾರ್ಯಕ್ರಮ’ ಜರುಗಲಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅದ್ಯಕ್ಷರಾದ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಅಧ್ಯಕ್ಷರು/ ರಿಜಿಸ್ಟ್ರಾರ್ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ ಕಟ್ಟಡ, ಮಡಿಕೇರಿ, ಕೊಡಗು ಜಿಲ್ಲೆ, ಮೊ ನಂ 6362588677 ಇಲ್ಲಿಂದ ಪಡೆಯಬಹುದಾಗಿದೆ ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.
- Thursday
- November 21st, 2024