ಕರ್ನಾಟಕದ ಕಾಂಗ್ರೆಸ್ ನ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು 13 ತಿಂಗಳಾದರೂ ಯಾವುದೇ ಅಭಿವೃದ್ಧಿ ಕೆಲಸಗಳನ್ನು ನಡೆಸದೇ ಮತದಾರರಿಗೆ ನೀಡಿದ ಪ್ರತಿಯೊಂದು ಭರವಸೆಗಳಿಗೆ ಅನ್ಯಾಯವೆಸಗುತ್ತಿದ್ದು ಕೃಷಿಕರ ಪಂಪ್ ಸೆಟ್ ಗಳಿಗೆ ನೀಡಿರುವ ಸಹಾಯ ರದ್ದುಮಾಡಿ ಡಿಸೇಲ್, ಪೆಟ್ರೋಲ್ ಬೆಲೆ ಏರಿಕೆ ಮಾಡಿ, ಜನಸಾಮಾನ್ಯರ ಗೃಹೋಪಯೋಗಿ ಸಾಮಾಗ್ರಿಗಳ ಬೆಲೆ ದುಪ್ಪಟ್ಟು ಮಾಡಿದೆ, ವಾಲ್ಮೀಕಿ ನಿಗಮದ ಹಣವನ್ನು ನುಂಗಿ ಹಾಕಿದೆ, ಮೈಸೂರು ಮೂಡಾದಲ್ಲಿ ಸೈಟುಗಳನ್ನು ಸಿದ್ಧರಾಮಯ್ಯರವರೇ ಪಡೆದುಕೊಂಡು ಸಾವಿರಾರು ಕೋಟಿ ಅವ್ಯವಹಾರ ಮಾಡಿ ರಾಜ್ಯದ ಜನತೆಗೆ ಅನ್ಯಾಯವೆಸಗಿರುವ ವಿರುದ್ಧ ನ್ಯಾಯಕ್ಕಾಗಿ ಈ ಪಾದಯಾತ್ರೆ ಆರಂಭವಾಗಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕಿದೆ. ತಕ್ಷಣ ಮುಖ್ಯಮಂತ್ರಿ ನೇರ ಹೊಣೆ ಹೊತ್ತು ರಾಜೀನಾಮೆ ನೀಡಿ ಪ್ರಜಾಪ್ರಭುತ್ವದ ಸಂವಿಧಾನಕ್ಕೆ ನ್ಯಾಯ ಒದಗಿಸುವ ತನಕ ನಮ್ಮ ಹೋರಾಟ ನಡೆಯಲಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ವಿವಿಧ ಸ್ಥರದ ಕಾರ್ಯಕರ್ತರು ಆ.07 ರಂದು ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡ ಪ್ರತಿಭಟನಾ ರ‌್ಯಾಲಿಗೆ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Thursday
- November 21st, 2024