ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಕ್ರಾಂತಿಯ ಹರಿಕಾರಪೂಜ್ಯಡಾ. ಕುರುಂಜಿ ವೆಂಕಟ್ರಮಣಗೌಡರ 11ನೇ ಪುಣ್ಯ ಸ್ಮರಣೆಯಕಾರ್ಯಕ್ರಮವು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್&ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದಡಾ. ಉಜ್ವಲ್‌ಯು.ಜೆ. ಪೂಜ್ಯರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ
ಡಾ. ಸುರೇಶ ವಿ., ಉಪ-ಪ್ರಾಂಶುಪಾಲರಾದ ಡಾ. ಶ್ರೀಧರ ಕೆ.,ಎಲ್ಲಾ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರುಗಳು ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.
- Tuesday
- December 3rd, 2024