ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಅರವಿಂದ ಅಯ್ಯಪ್ಪ ಸತಗುಂಡಿ ಅಧಿಕಾರ ಸ್ವೀಕಾರ

ಸುಬ್ರಹ್ಮಣ್ಯ ಆಗಸ್ಟ್ 8: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿಯಾಗಿ ಅರವಿಂದ ಅಯ್ಯಪ್ಪ ಸತಗುಂಡಿ ಇಂದು ಗುರುವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಅವರು ಹುಲಿಗಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

. . . . . . . . .

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಗೋವಿಂದ ನಾಯ್ಕ ಅವರು ಅಧಿಕಾರ ಹಸ್ತಾಂತರಿಸಿ ಮಾತೃ ಸಂಸ್ಥೆ ಹಿಂದೂ ಧಾರ್ಮಿಕ ದತ್ತಿ ನಿಧಿ ಹಾಗೂ ಉಂಬಳಿ ಇಲಾಖೆ ಮಂಗಳೂರಿನ ಸಹಾಯಕ ಕಮಿಷನರ್ ಹುದ್ದೆಗೆ ತೆರಳಿದರು. ಅವರನ್ನು ಈ ದೇವಳದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಕಚೇರಿ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್, ದೇವಳದ ಇಂಜಿನಿಯರ್ ಉದಯಕುಮಾರ್ ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading