ಸುಳ್ಯ ತಾಲೂಕು ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೂನಡ್ಕ ಪೇರಡ್ಕ ರಸ್ತೆಯಲ್ಲಿ ಸಂಪರ್ಕ ಕಲ್ಪಿಸುವ ದರ್ಕಸ್ ಮುಳುಗು ಸೇತುವೆ ಮಳೆಗಾಲದಲ್ಲಿ ಪಯಸ್ವಿನಿ ನದಿಯಲ್ಲಿ ಪ್ರವಾಹ ಹೆಚ್ಚಾದಾಗ ಆಗಾಗ ಮುಳುಗಡೆಯಗುತ್ತಿದ್ದು ಈ ರಸ್ತೆಯಲ್ಲಿ ನೂರಾರು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ನಿತ್ಯ ಸಂಚಾರ ಮಾಡುತ್ತಿದ್ದು ನೂರಾರು ಮನೆಗಳಿಗೆ ಸಂಪರ್ಕ ಕಲ್ಪಿಸುವ ಮಂದಿರ ಮಸೀದಿ ಶಾಲಾ ವಿದ್ಯಾರ್ಥಿಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮಳೆಗಾಲ ಪದೇ ಪದೇ ಮುಳುಗಡೆಯಗುತ್ತಿದ್ದು ಈ ಬಗ್ಗೆ ಹೊಸ ಸೇತುವೆ ನಿರ್ಮಾಣ ಹಾಗೂ ಬದಲಿ ರಸ್ತೆಯಲ್ಲಿ ಸಂಚಾರ ಮಾಡಲು ಸೂಕ್ತ ವೆವಸ್ಥೆ ಕಲ್ಪಿಸುವರೇ ಹಾಗೂ ಪ್ರಾಕೃತಿಕ ವಿಕೋಪದಿಂದ ಹಾಳಾದ ಗ್ರಾಮದ ರಸ್ತೆಗಳಿಗೆ ಅನುದಾನ ದೊರಕಿಸಿಕೊಡುವರೇ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ರವರು ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮಹೋಪಾತ್ರ ರವರಿಗೆ ಸೇತುವೆ ಭೇಟಿ ಸ್ಥಳದಲ್ಲಿ ಮನವಿ ಸಲ್ಲಿಸಿದರು, ಸಹಾಯಕ ಕಮಿಷನರ್ ರವರು ಸ್ಥಳ ಪರಿಶೀಲನೆ ನಡೆಸಿ ಸರಕಾರದ ಹಾಗೂ ಮೇಲಧಿಕಾರಿಗಳ ಗಮನಕ್ಕೆ ತರುವುದಾಗಿ ಹಾಗೂ ಅಗತ್ಯ ಮುಂಜಾಗ್ರತೆ ವಹಿಸುವರೇ ಸೂಚಿಸಲಾಯಿತು.ಈ ಸಂದರ್ಭದಲ್ಲಿ ಭೂಕುಸಿತ ಪ್ರದೇಶಗಳ ಬಗ್ಗೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್.ಕೆ.ಹನೀಫ್ ಮಾಜಿ ಅಧ್ಯಕ್ಷರಾದ ಜಿ.ಕೆ.ಹಮೀದ್ ಗೂನಡ್ಕ, ಸ್ಥಳೀಯ ಸದಸ್ಯರಾದ ಪಿ.ಕೆ.ಅಬೂಸಾಲಿ ಗೂನಡ್ಕ,ಭೂ ಗಣಿ ಇಲಾಖೆಯ ಅದಿಕಾರಿ ಶ್ರೀಮತಿ ವಸುದಾ ಸಹಾಯಕ ಕಮಿಷನರ್ ಆಪ್ತ ಕಾರ್ಯದರ್ಶಿ ನಿತೀನ್ ಕಂದಾಯ ಅದಿಕಾರಿ ಅವಿನ್ ರಂಗತ್ಮಲೆ,ಗ್ರಾಮ ಆಡಳಿತ ಅದಿಕಾರಿ ಮಂಜುನಾಥ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
- Wednesday
- December 4th, 2024