- Tuesday
- December 3rd, 2024
ಕುಲ್ಕುಂದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಅಂಗವಾಗಿ ಶ್ರೀ ದೇವರಿಗೆ ಹಾಲು ,ಸೀಯಾಳ, ನಾಗತಂಬಿಲ ಸೇವೆ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಅಂಗವಾಗಿ ಕ್ಷೀರಾಭಿಷೇಕ, ಸೀಯಾಳ ಅಭಿಷೇಕ ನಡೆಯಿತು. ಭಕ್ತರಿಂದ ನಾಗಪ್ರತಿಷ್ಠಾ ಮಂಟಪದಲ್ಲಿನ ನಾಗರಾಜನಿಗೆ ಹಾಲು ಸಮರ್ಪಣೆ, ಪುರೋಹಿತ ರಿಂದ ನಾಗರಾಜನಿಗೆ ಹಾಲು, ಸೀಯಾಳ, ಹಣ್ಣು ಕಾಯಿ ಸಮರ್ಪಣೆ ನಡೆಯಿತು. ಅತ್ಯಧಿಕ ಸಂಖ್ಯೆಯಲ್ಲು ಭಕ್ತರು ಶ್ರೀ ದೇವರ ದರುಶನ ಪಡೆದರು.
ಗುತ್ತಿಗಾರು ಗ್ರಾಮದ ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ ಅಂಗವಾಗಿ ಕ್ಷೀರಾಭಿಷೇಕ, ಸೀಯಾಳ ಅಭಿಷೇಕ, ನಾಗ ತಂಬಿಲ ನಡೆಯಿತು. ಮಧ್ಯಾಹ್ನ ದೇವಸ್ಥಾನದಲ್ಲಿ ಆಶ್ಲೇಷ ಪೂಜೆ ನೆರವೇರಲಿದೆ.
ಕೊಡಿಯಾಲ ಗ್ರಾಮದ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ದೇವಾಲಯದ ಅರ್ಚಕರಾದ ಶಂಕರನಾರಾಯಣ ಮಯ್ಯರ ನೇತೃತ್ವದಲ್ಲಿ ನಾಗರಪಂಚಮಿ ಅಂಗವಾಗಿ ಹಾಲು,ಸೀಯಾಳ ಅಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿ ಹಾಗೂ ಊರ ಭಕ್ತಾದಿಗಳು ಭಾಗವಹಿಸಿದ್ದರು.
ಕರ್ನಾಟಕ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಜಂಟಿ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಆ.8ರಂದು ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಕುಮಾರಸ್ವಾಮಿ ವಿದ್ಯಾಲಯದ ಹಿರಿಯ ವಿದ್ಯಾರ್ಥಿ ಹಾಗೂ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಆಟಗಾರ ...
ಸುಳ್ಯ ತಾಲೂಕು ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೂನಡ್ಕ ಪೇರಡ್ಕ ರಸ್ತೆಯಲ್ಲಿ ಸಂಪರ್ಕ ಕಲ್ಪಿಸುವ ದರ್ಕಸ್ ಮುಳುಗು ಸೇತುವೆ ಮಳೆಗಾಲದಲ್ಲಿ ಪಯಸ್ವಿನಿ ನದಿಯಲ್ಲಿ ಪ್ರವಾಹ ಹೆಚ್ಚಾದಾಗ ಆಗಾಗ ಮುಳುಗಡೆಯಗುತ್ತಿದ್ದು ಈ ರಸ್ತೆಯಲ್ಲಿ ನೂರಾರು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ನಿತ್ಯ ಸಂಚಾರ ಮಾಡುತ್ತಿದ್ದು ನೂರಾರು ಮನೆಗಳಿಗೆ ಸಂಪರ್ಕ ಕಲ್ಪಿಸುವ ಮಂದಿರ ಮಸೀದಿ ಶಾಲಾ ವಿದ್ಯಾರ್ಥಿಗಳಿಗೆ ಸಂಪರ್ಕ ಕಲ್ಪಿಸುವ...