ಕರ್ನಾಟಕ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಜಂಟಿ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಆ.8ರಂದು ನಡೆಯಿತು.
ಪಂದ್ಯಾಟದ ಉದ್ಘಾಟನೆಯನ್ನು ಕುಮಾರಸ್ವಾಮಿ ವಿದ್ಯಾಲಯದ ಹಿರಿಯ ವಿದ್ಯಾರ್ಥಿ ಹಾಗೂ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಆಟಗಾರ ಹೃದಯ್ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ವೇದಿಕೆಯ ಅಧ್ಯಕ್ಷತೆಯನ್ನು ಶಾಲಾ ಅಧ್ಯಕ್ಷರಾದ ಗಣೇಶ್ ಪ್ರಸಾದ್ ವಹಿಸಿದ್ದರು. ಸಮಾರಂಭದ ವೇದಿಕೆಯಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹೆಚ್ ಎಲ್ ವೆಂಕಟೇಶ್ ಕುಮಾರಸ್ವಾಮಿ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಭಾರತಿ ದಿನೇಶ್, ಸಂಸ್ಥೆಯ ಉಪಾಧ್ಯಕ್ಷರಾದ ಶಿವರಾಮ್ ಏನೇಕಲ್, ಶ್ರೀಮತಿ ಆಶಾ ನಾಯಕ್ ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ , ಶ್ರೀಮತಿ ಪುಷ್ಪಾವತಿ ಕಾರ್ಯದರ್ಶಿಗಳು ಸುಳ್ಯ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಶ್ರೀಮತಿ ಸಂಧ್ಯಾ ಕುಮಾರಿ ವಿಷಯ ಪರಿವೀಕ್ಷಕರು BEO ಕಚೇರಿ ಸುಳ್ಯ, ಸಂಚಾಲಕರಾದ ಚಂದ್ರಶೇಖರ ನಾಯರ್ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ಯೋಗನಾಥ ನಿರೂಪಿಸಿದರು ಹಾಗೂ ಶ್ರೀಮತಿ ಕಾರ್ತಿಕೆ ವಂದಿಸಿದರು.
ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ, ದ್ವಿತೀಯ ಸೈಂಟ್ ಜೋಸೆಫ್ ಸುಳ್ಯ, ಬಾಲಕಿಯರ ವಿಭಾಗದಲ್ಲಿ ಪ್ರಥಮ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ದ್ವಿತೀಯ ಸವೇರಪುರ ಕಲ್ಲುಗುಂಡಿ 14 ರ ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಥಮ ಆರ್ಯನ್ ಕುಮಾರಸ್ವಾಮಿ ಸುಬ್ರಹ್ಮಣ್ಯ, 14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸೃಷ್ಟಿ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹಬಾಲಕರ ಪ್ರಥಮ ಸ್ಥಾನ ಪಡೆದರು.