ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಹಾಗೂ ಶ್ರೀ ಸುಬ್ರಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಸಹಯೋಗದೊಂದಿಗೆ ಕಾಲೇಜು ಮಕ್ಕಳಿಗೆ ದುಶ್ಚಟಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀಮತಿ ವಿಮಲ ರಂಗಯ್ಯ ರವರು ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ರೇಖಾ ರಾಣಿ ಜಿ.ಎಸ್ ಉಪನ್ಯಾಸಕರು ಶ್ರೀ ಸುಬ್ರಮಣ್ಯೇಶ್ವರ ಕಾಲೇಜ್ ಇವರು ವಹಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿಗಳಾದ ಶ್ರೀ ಗಣೇಶ ಆಚಾರ್ಯರವರು ಮಾತನಾಡುತ್ತಾ “ಸ್ವಾಸ್ಥ್ಯ ಸಮಾಜ ನಿರ್ಮಾಣ ವಾಗಬೇಕಾದರೆ ಯುವ ಜನತೆಯ ಪಾತ್ರ ಬಹಳ ಅಗತ್ಯ ಹದಿಹರೆಯದ ವಯಸ್ಸಿನಲ್ಲಿ ದಾರಿ ತಪ್ಪುವ ವಿದ್ಯಾರ್ಥಿಗಳು ಈ ಬಗ್ಗೆ ಜಾಗೃತರಾಗಿರಬೇಕು” ಎಂದು ವ್ಯಸನಗಳ ಬಗ್ಗೆ ಪಂಚಮಹಾ ಕಾಯಿಲೆಯ ಬಗ್ಗೆ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಮುಖ್ಯ ಅತಿಥಿಗಳಾಗಿ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಶ್ರೀ ಮಾಧವ ಚಾಂತಾಳ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಅಧ್ಯಕ್ಷರಾದ ತೀರ್ಥರಾಮ್ ದೋಣಿಪಳ್ಳ, ಸುಬ್ರಹ್ಮಣ್ಯ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ದಿನೇಶ್, ವಿಪತ್ತು ನಿರ್ವಹಣಾ ಘಟಕದ ಘಟಕ ಪ್ರತಿನಿಧಿ ಶ್ರೀ ಸತೀಶ್ ಟಿ ಎನ್, ಮೇಲ್ವಿಚಾರಕ ಕೃಷ್ಣಪ್ಪ ಎಂ, ಸೇವಾ ಪ್ರತಿನಿಧಿ ಗಳು, ಉಪನ್ಯಾಸಕರು ಉಪಸ್ಥಿತರಿದ್ದರು
- Thursday
- November 21st, 2024