- Thursday
- November 21st, 2024
ಗಾಂಧಿ ಗ್ರಾಮ ಪುರಸ್ಕೃತ ಪಂಚಾಯತ್ ಕುರಿತ ಮಾಹಿತಿ ಇಲ್ಲಿದೆ ಸಂಪಾಜೆ : ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲುಗುಂಡಿ ಪೇಟೆಯ ಪಕ್ಕದಲ್ಲಿಯೇ ಹೊಳೆಯು ಹರಿಯುತ್ತಿದ್ದು ಕೆಲ ವರ್ಷಗಳ ಹಿಂದೆ ಹೊಳೆಯ ನೀರು ನುಗ್ಗಿ ಭಾರಿ ಅವಾಂತರವೇ ಸೃಷ್ಟಿಯಾಗಿತ್ತು. ಇದಾದ ಬಳಿಕ ಸಂಘಟನ ಚತುರ ಈ ಹಿಂದಿನ ಸಾಲಿನ ಅಧ್ಯಕ್ಷರಾಗಿದ್ದ ಜಿ ಕೆ ಹಮೀದ್...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆ ಆಯೋಜಿಸಿದ ಗೀತಗಾಯನ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದ ಸ್ಕೌಟ್ ವಿದ್ಯಾರ್ಥಿಗಳು ಪ್ರಥಮ ಸ್ಥಾನ, ಗೈಡ್ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ತಂಡವನ್ನು ಶಾಲಾ ಸ್ಕೌಟ್ಸ್ ಗೈಡ್ಸ್ ಶಿಕ್ಷಕರು ತರಬೇತುಗೊಳಿಸಿದ್ದರು ಎಂದು ಶಾಲಾ ಪ್ರಕಟಣೆ ತಿಳಿಸಿದೆ.
ಕೊಲ್ಲಮೊಗ್ರದಲ್ಲಿ ಅಂಚೆ ಪಾಲಕರಾಗಿರುವ ಜಾಲ್ಸೂರು ಮೂಲದ ಅಬ್ದುಲ್ ಜಬ್ಬಾರ್ ಅವರು ಆ.12 ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.ಚಾಳೆಪ್ಪಾಡಿ ಎಂಬಲ್ಲಿ ರೂಮ್ ನಲ್ಲಿ ವಾಸವಿರುವ ಅವರು ಅಲ್ಲೇ ನಿಧನರಾಗಿದ್ದು, ಅವರಿಗೆ 55 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ, ಮಕ್ಕಳು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆಯುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ನಾಲ್ಕು ಪಿಎಂಶ್ರೀ ಶಾಲೆಗಳ ನಾಲ್ವರು ವಿದ್ಯಾರ್ಥಿಗಳು ಹಾಗೂ ನಾಲ್ವರು ಶಿಕ್ಷಕರು ವಿಶೇಷ ಅವಕಾಶ ಪಡೆದುಕೊಂಡಿದ್ದು, ಇದರಲ್ಲಿ ಮೈಸೂರು ಶೈಕ್ಷಣಿಕ ವಿಭಾಗದಿಂದ ದ.ಕ. ಜಿಲ್ಲೆಯ ಓರ್ವ ವಿದ್ಯಾರ್ಥಿನಿ, ಶಿಕ್ಷಕಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷೆಯೊಬ್ಬರಿಗೆ ಭಾಗವಹಿಸಲು ವಿಶೇಷ ಆಮಂತ್ರಣ ದೊರಕಿದೆ.ದ.ಕ. ಜಿಲ್ಲೆಯ ಮಂಗಳೂರಿನ ಶಕ್ತಿನಗರ ನಾಲ್ಯಪದವು ಕುವೆಂಪು...
ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆ , ಪಾದೆ , ನರಿಮೊಗರು, ಪುತ್ತೂರುಇದರ ಆಶ್ರಯದಲ್ಲಿ ,ಗೋಸೇವಾ ಗತಿ ವಿಧಿ,ಕರ್ನಾಟಕ ದಕ್ಷಿಣ ಪ್ರಾಂತ ಹಾಗೂ ಅರೋಗ್ಯ ಭಾರತಿ , ಪುತ್ತೂರು ಜಿಲ್ಲೆ ಇದರ ಸಹಯೋಗದಲ್ಲಿ"Answer for cancer " ಖ್ಯಾತಿಯ ಡಾ .ಡಿ .ಪಿ .ರಮೇಶ್ , ಆಯುರ್ವೇದ ತಜ್ಞ ವೈದ್ಯರು ಹಾಗೂ ಪಂಚಗವ್ಯ ಚಿಕಿತ್ಸಾ ತಜ್ಞರು, ಬೆಂಗಳೂರು...
ಯಾದವ ಸಭಾ ಬೆಟ್ಟ ಪ್ರಾದೇಶಿಕ ಸಮಿತಿ ಇದರ ಆಶ್ರಯದಲ್ಲಿ ಸಾರ್ವಜನಿಕರಿಗೆ ಎರಡನೇ ವರ್ಷದ 'ಆಟಿಡೊಂಜಿ ದಿನ ಹಾಗೂ ಗ್ರಾಮೀಣ ಕ್ರೀಡಾಕೂಟ ಆ. 11ರಂದು ಬೊಳ್ಳಾಜೆ ಶಾಲಾ ವಠಾರಲ್ಲಿ ನಡೆಯಿತು. ಮಂಗಳೂರಿನ ಖ್ಯಾತ ವೈದ್ಯರಾದ ಡಾ| ಶ್ರೀರಾಮ ಭಟ್ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಯಾದವ ಸಭಾ ಬೆಟ್ಟ ಪ್ರಾದೇಶಿಕ ಸಮಿತಿಯ ಅಧ್ಯಕ್ಷರಾದ ಚಂದ್ರಹಾಸ ಕಿಲಾರ್ಕಜೆ...