Ad Widget

ಹರಿಹರ ಪಲ್ಲತ್ತಡ್ಕ : ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಹರಿಹರ ಪಲ್ಲತ್ತಡ್ಕದ ಸರಕಾರಿ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬೆಳಿಗ್ಗೆ 9:00 ಗಂಟೆಗೆ ಸರಿಯಾಗಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ತೀರ್ಥರಾಮ ಕಿರಿಭಾಗ ಧ್ವಜಾರೋಹಣ ನೆರವೇರಿಸಿದರು. ನಂತರ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ನಂತರ ಗ್ರಾಮ ಪಂಚಾಯತ್ ಹಾಗೂ ವಿದ್ಯಾರ್ಥಿಗಳ ಪೋಷಕರ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ನೀಡಲಾಯಿತು.
ಶಾಲಾ ನಾಯಕಿ ಲಿಶ್ಮಿತಾ ಸ್ವಾಗತಿಸಿ, ಸಾಂಸ್ಕೃತಿಕ ನಾಯಕಿ ಬೃಂದಾ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕರಾದ ವೆಂಕಟೇಶ್ ನಾಯಕ್ ವಂದಿಸಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಕೃಪಾ.ಪಿ.ಎಸ್, ವಿದ್ಯಾರ್ಥಿಗಳು ಹಾಗೂ ಸಹಶಿಕ್ಷಕರಾದ ವೆಂಕಟೇಶ್ ನಾಯಕ್, ಮೇದಪ್ಪ ಗೌಡ, ವನಿತಾ.ಜಿ, ಅಕ್ಷತಾ.ಬಿ.ಯಸ್, ಉಮಾಶ್ರೀ.ಎಸ್, ಜಯಶ್ರೀ.ಕೆ ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!