Ad Widget

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಜಲಸಿರಿ, ಜಲನಿಧಿ ಹಾಗೂ ಸಂರಕ್ಷಣೆ ಬಗ್ಗೆ ಕಾರ್ಯಗಾರ



ಸುಬ್ರಹ್ಮಣ್ಯ  : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರೋಟರಿ ಜಿಲ್ಲೆ 3181 ಇದರ ಜಿಲ್ಲಾ ಕಾರ್ಯಕ್ರಮವಾದ ಜಲನಿಧಿ, ಜಲಸಿರಿ ಹಾಗೂ ಜಲ ಸಂರಕ್ಷಣಾ ಕಾರ್ಯಾಗಾರವನ್ನು ಮಂಗಳವಾರ ಏರ್ಪಡಿಸಲಾಯಿತು.


ಕಾರ್ಯಕ್ರಮವನ್ನು ರೋಟರಿ ಜಿಲ್ಲಾ ಪೂರ್ವ ಅಸಿಸ್ಟೆಂಟ್ ಗವರ್ನರ್ ಶಿವರಾಮ್ ಏನೆಕಲ್ಲು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ಚಂದ್ರಶೇಖರ ನಾಯರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷರಾದ ಮಾಧವ ಸುವರ್ಣ, ಕುಮಾರಸ್ವಾಮಿ ವಿದ್ಯಾಲಯದ ಮುಖ್ಯೋಪಾಧ್ಯಾಯರಾದ ವಿದ್ಯಾರತ್ನ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂಕೀರ್ಥ ಹೆಬ್ಬಾರ್, ರೋಟರಿ ಕಾರ್ಯದರ್ಶಿ ಚಿದಾನಂದ ಕುಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರೋಟರಿ ಜಿಲ್ಲಾ 3181 ಇದರ ಜಲ ನಿರ್ವಹಣೆ-ಸಂರಕ್ಷಣಾ ವಿಭಾಗದ ಚೇರ್ಮೆನ್ ಹಾಗೂ ಮಂಗಳೂರು ನಿರ್ಮಿತಿ ಕೇಂದ್ರದ ಎಕ್ಸಿಕ್ಯೂಟಿವ್ ಡೈರೆಕ್ಟರ್ ರಾಜೇಂದ್ರ ಕಲ್ಪಾವಿ ಅವರು ವಿವರವಾದ ಮಾಹಿತಿಗಳನ್ನು ನೀಡುವುದರ ಮೂಲಕ ನಡೆಸಿಕೊಟ್ಟರು.
ಕುಮಾರಸ್ವಾಮಿ ಪ್ರಾಥಮಿಕ ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ 1,000 ವಿದ್ಯಾರ್ಥಿಗಳು ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದರು. ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷರಾದ ಕಿಶೋರ್ ಕುಮಾರ್ ಸ್ವಾಗತಿಸಿರು. ಕಾಲೇಜಿನ ಉಪನ್ಯಾಸಕ ಸುಬ್ರಹ್ಮಣ್ಯ ಆತ್ಯಾಡಿ ಪರಿಚಯಿಸಿದರು. ಕುಮಾರಿ ಜಸ್ಮಿತಾ ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!