- Wednesday
- April 2nd, 2025

ಇಂದು ತಾಲೂಕಿನಾದ್ಯಂತ ಸುರಿದ ಭಾರಿ ಮಳೆಗೆ ವಿವಿಧ ಪ್ರದೇಶಗಳಲ್ಲಿ ನೀರು ನುಗ್ಗಿದೆ. ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಸಾರ್ವಜನಿಕರೇ ಖರ್ಚು ಹಾಕಿ ನಿರ್ಮಾಣ ಮಾಡಿದ ತೂಗು ಸೇತುವೆ ಮುಳುಗಡೆ ಯಾಗಿದೆ. ಕಸ ಬಿದಿರು, ಹಾಗೂ ಮರದ ಗೆಲ್ಲುಗಳು ಸಿಲುಕಿ ತೂಗು ಸೇತುವೆಗೆ ಹಾನಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸುಳ್ಯ:ಅಟಲ್ ಜಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ಇದರ ವತಿಯಿಂದ ಇಂದು ಸುಳ್ಯದ ನರೇಂದ್ರ ವಿಹಾರದಲ್ಲಿ ಮಾಜಿ ಪ್ರಧಾನಿ, ಅಜಾತಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ದಿನವನ್ನು ಆಚರಿಸಲಾಯಿತು. ಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಪ್ರಮುಖರು ಹಾಗೂ ಟ್ರಸ್ಟ್ ಕೋಶಾಧಿಕಾರಿಗಳಾದ ಎ ವಿ ತೀರ್ಥರಾಮ, ಶಾಸಕಿ ಹಾಗೂ ಟ್ರಸ್ಟಿಗಳಾದ ಕು. ಭಾಗೀರಥಿ ಮುರುಳ್ಯ ಮತ್ತು...

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿದ ಲೇಸು ಕಾರ್ಯಕ್ರಮ ಎಲ್ಲರ ಗಮನಸೆಳೆಯಿತು. ಪ್ರತಿವರ್ಷ ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಈ ಮೂಲಕ ತುಳುನಾಡಿನ ಸಂಸ್ಕೃತಿ ಅರಿವು ಮೂಡಿಸಲಾಗುತ್ತಿದೆ.ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ರಾವ್ ಯು ವಹಿಸಿದ್ದರು. ಶಾಲಾ ಸಂಚಾಲಕರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ರುಕ್ಮಯ್ಯ ನಾಯ್ಕ, ಉಪಾಧ್ಯಕ್ಷೆ...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ವಾಣಿಜ್ಯಶಾಸ್ತ್ರ ಮತ್ತು ಉದ್ಯಮ ಆಡಳಿತ ವಿಭಾಗದ ಉಪನ್ಯಾಸಕರಾದ ಶ್ರೀ ವಿನ್ಯಾಸ್ ಹೊಸೋಳಿಕೆ ಇವರು, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಂಶುಪಾಲರಾದ ಪ್ರೋ. ಡಾ. ಉದಯ್ ಕುಮಾರ್ ಇರ್ವತ್ತೂರು ಇವರ ಮಾರ್ಗದರ್ಶನದಲ್ಲಿ ಮಂಡಿಸಿದ "ಮಾರ್ಕೆಟಿಂಗ್ ಸ್ಟ್ರಾಟಜಿಸ್ ಆಫ್ ಸೋಷಿಯಲ್ ಎಂಟರ್ಪ್ರೈಸಸ್ - ಎ ಸ್ಟಡಿ...

ಸುಳ್ಯದ ಹಳೆಗೇಟಿನ ಸಾಂಸ್ಕೃತಿಕ ಸಂಘದ ಇದರ ವತಿಯಿಂದ ನಡೆಯುವ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ಸಂಜೆ ಹಳೆಗೇಟು ವಸಂತ ಕಟ್ಟೆಯ ಬಳಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಬಿ.ಶ್ರೀನಿವಾಸ್ ರಾವ್, ಕಾರ್ಯದರ್ಶಿ ಕೆ.ಶಿವನಾಥ್ ರಾವ್. ಉಪಕಾರ್ಯದರ್ಶಿ ರಾಕೇಶ್ ಕುಂಟಿಕಾನ, ಖಜಾಂಜಿ ಯು. ಚಿತ್ತರಂಜನ್, ಸಚಿನ್ ರಾವ್, ಯತಿನ್ ರಾವ್, ಧನಂಜಯ್...

ಕೊಲ್ಲಮೊಗ್ರ ಭಾಗದಲ್ಲಿ ಇಂದು ಸಂಜೆ ಸುರಿದ ಭಾರಿ ಮಳೆಗೆ ಸೇತುವೆ ಮುಳುಗಡೆಯಾಗಿದ್ದು ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು ಅಶ್ವಥಮರದ ಸಮೀಪ ತಲುಪಿದ್ದು ಕಲ್ಮಕಾರು ಸಂಪರ್ಕ ಕಡಿತಗೊಂಡಿದೆ ಎಂದು ತಿಳಿದುಬಂದಿದೆ.

ಸುಳ್ಯ: ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್ ನೇತೃತ್ವದಲ್ಲಿ ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಪ್ರಗತಿ ಪರಿಶೀಲನಾ ಸಭೆ ಆ.16ರಂದು ನಡೆಯಿತು. ಸಭೆ ಪ್ರಾರಂಭವಾಗುತ್ತಿದ್ದಂತೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ದಿನಗೂಲಿ ಸಂಖ್ಯೆ ಕಡಿಮೆ ಇರುವ ಗ್ರಾಮ ಪಂಚಾಯತ್ ಗಳ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಶ್ನಿಸಿ ಯಾವ ಕಾರಣಕ್ಕೆ...

ಕರಿಕ್ಕಳ : 78ನೇ ಸ್ವಾತಂತ್ರ್ಯೋತ್ಸವವನ್ನು ಶ್ರಮದಾನ ಮಾಡುವ ಮೂಲಕ ವಿಷ್ಣುಸೇವಾ ಶಕ್ತಿ ನಿಡ್ವಾಳ ಸಂಘಟನೆಯವರು ಆಚರಿಸಿದರು. ನಿಡ್ವಾಳ ದಿಂದ ಅಲೆಂಗಾರ, ಮೇಲ್ಪಾಡಿ, ಅತ್ಯಡ್ಕಕ್ಕೆ ಸಂಪರ್ಕಿಸುವ ರಸ್ತೆಯನ್ನು ಸ್ವಚ್ಛ ಮತ್ತು ದುರಸ್ತಿ ಗೊಳಿಸಿದರು.

ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃ ಶಕ್ತಿ ಹಾಗೂ ದುರ್ಗಾ ವಾಹಿನಿ ಅಯೋಧ್ಯೆ ಶಾಖೆ ಎಲಿಮಲೆ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಬೃಹತ್ ಪಂಜಿನ ಮೆರವಣಿಗೆ ಆ. 13 ರಂದು ಎಲಿಮಲೆ ಯಲ್ಲಿ ನಡೆಯಿತು. ಹಿರಿಯ ಸ್ವಯಂ ಸೇವಕರಾದ ಧರ್ಮಪಾಲ ಗಟ್ಟಿಗಾರು ಮೆರವಣಿಗೆಗೆ ಚಾಲನೆ ನೀಡಿದರು. ಪಂಜಿನ ಮೆರವಣಿಗೆ ನಂತರ ಸಭಾ ಕಾರ್ಯಕ್ರಮ...

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮೊದಲಿಗೆ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಇದರ ಅಂಗವಾಗಿ ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಪಾರೆಪ್ಪಾಡಿಯವರು ಸರ್ವರನ್ನು ಸ್ವಾಗತಿಸಿದರು. ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಅಮೃತ ಇವರು 78ನೇ ಧ್ವಜಾರೋಹಣ ಮಾಡುವರೆ "ಎಸ್ ಡಿ ಎಂ ಸಿ" ಅಧ್ಯಕ್ಷರಾದ ಶ್ರೀ ಶಿವರಾಮ ಉತ್ರoಬೆ...

All posts loaded
No more posts