
ಸುಬ್ರಹ್ಮಣ್ಯ ಆಗಸ್ಟ್ 15: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು ಹೈಸ್ಕೂಲ್ ವಿಭಾಗದ ಮುಖ್ಯ ಶಿಕ್ಷಕರಾದ ಯಶವಂತ ರೈ ನೆರವೇರಿಸಿದರು.
ಸಭಾಧ್ಯಕ್ಷತೆಯನ್ನು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ ನಾಯಕ್ ವಹಿಸಿದ್ದರು. ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಚಂದ್ರಶೇಖರ ನಾಯರ್ ಮುಖ್ಯ ಅತಿಥಿಗಳಾಗಿದ್ದರು. ಈ ಸಂದರ್ಭದಲ್ಲಿ ರೋಟರಿ ವಲಯ 5ರಜೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ, ಕೋಶಾಧಿಕಾರಿ ಜಯಪ್ರಕಾಶ್, ಪೂರ್ವ ಕಾರ್ಯದರ್ಶಿ ಗಳಾದ ಗಿರೀಶ್, ರತ್ನಾಕರ, ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹಾಗೂ ಪ್ರಾಥಮಿಕ ಶಾಲಾ ವಿಭಾಗದ ಬೋಧಕ ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.