

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿದ ಲೇಸು ಕಾರ್ಯಕ್ರಮ ಎಲ್ಲರ ಗಮನಸೆಳೆಯಿತು. ಪ್ರತಿವರ್ಷ ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಈ ಮೂಲಕ ತುಳುನಾಡಿನ ಸಂಸ್ಕೃತಿ ಅರಿವು ಮೂಡಿಸಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ರಾವ್ ಯು ವಹಿಸಿದ್ದರು. ಶಾಲಾ ಸಂಚಾಲಕರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ರುಕ್ಮಯ್ಯ ನಾಯ್ಕ, ಉಪಾಧ್ಯಕ್ಷೆ ಶ್ರೀಮತಿ ಹರಿಣಾಕ್ಷಿ, ಶಾಲಾ ಮುಖ್ಯ ಗುರು ಉದಯ ಕುಮಾರ್ ರೈ ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಟಿ ಆಚರಣೆ ಮಹತ್ವ ಕುರಿತು ನೂಜಿಬಾಳ್ತಿಲ ಕಡಬ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಗಣೇಶ್ ನಡುವಾಲ್ ಮಾಹಿತಿ ನೀಡಿದರು. ಶಾಲೆಯಲ್ಲಿ ವಿದ್ಯಾರ್ಥಿಗಳು ತಂದಿರುವ ಆಟಿದ ಅಟೀಲ್ ಪ್ರದರ್ಶನಗೊಂಡಿತು. ಶಾಲಾ ಮುಖ್ಯ ಗುರು ಉದಯ ಕುಮಾರ್ ರೈ ಎಸ್ ಪ್ರಸ್ತಾವಿಕ ನುಡಿಗಳನ್ನಾಡಿದರು. ಶಾಲಾ ಶಿಕ್ಷಕಿ ಶುಭಾ ಡಿ ತುಳುವಿನಲ್ಲಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಹವಿನಾಕ್ಷಿ ವಂದನಾರ್ಪಣೆ ಸಲ್ಲಿಸಿದರು. ಮಧ್ಯಾಹ್ನ ನಂತರ ಆಟಿ ಕಳಂಜ ನೃತ್ಯ ಎಲ್ಲರ ಗಮನ ಸೆಳೆಯಿತು. ಎಲ್ಲಾ ಮಕ್ಕಳು ಚೆನ್ನೇಮನೆ ಆಟ ಆಡಿ ಸಂಭ್ರಮಪಟ್ಟರು. ಈ ಸಂದರ್ಭದಲ್ಲಿ ಶಾಲಾ sdmc ಸದಸ್ಯರು, ವಿದ್ಯಾರ್ಥಿ ಪೋಷಕರು ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.