
ರಾಜ್ಯದ ಅಭಿವೃದ್ದಿಯ ಹರಿಕಾರ, ಗ್ಯಾರೆಂಟಿಗಳ ಸರದಾರ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆಇಲ್ಲದೆ ಈ ನಾಡಿನ 2 ನೇ ಅವಧಿಗೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆ ನಡೆಸಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಮತ್ತು ಕೇಂದ್ರ ಸರಕಾರವು ರಾಜ್ಯಭವನವನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಹೊರಟಿರುವುದನ್ನು ಸುಳ್ಯ ತಾಲೂಕು ಮಹಿಳಾ ಕಾಂಗ್ರೆಸ್ ಘಟಕ ಖಂಡಿಸುತ್ತದೆ ಎಂದು ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಗೀತಾ ಕೋಲ್ಚಾರ್ ರವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
