- Wednesday
- April 2nd, 2025

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 21/08/2024 ರಂದು ಬೆಂಗಳೂರು ಫಾರ್ಮಸ್ಯುಟಿಕಲ್ಸ್ ಹಾಗೂ ರಿಸರ್ಚ್ ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಇದರ ಸಹಯೋಗದೊಂದಿಗೆ ನಡೆಯಲಿರುವ ಎರಡು ದಿನದ 'ಸಕ್ಷಮ್' ಕಾರ್ಯಾಗಾರವನ್ನುಕಾರ್ಯಗಾರವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ ಡಿ.ವಿ. ಯವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಬೆಂಗಳೂರು ಫಾರ್ಮಸ್ಯುಟಿಕಲ್ಸ್ ಹಾಗೂ...

ಆ.22 ಗುರುವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ ಮತ್ತು ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ...

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ಇದರ ವತಿಯಿಂದ ಗ್ರಾಮ ಪಂಚಾಯತ್ ಗುತ್ತಿಗಾರು, ಅರೋಗ್ಯ ಕೇಂದ್ರ ಗುತ್ತಿಗಾರು, ಜಿಲ್ಲಾ ಮತ್ತು ತಾಲೂಕು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು, ಸುಳ್ಯ ಅಮರ ಸಂಜೀವಿನಿ ಗ್ರಾಮದ ಮಟ್ಟದ ಒಕ್ಕೂಟ ಗುತ್ತಿಗಾರು, ಲಯನ್ಸ್ ಕ್ಲಬ್ ಗುತ್ತಿಗಾರು ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ, ರಕ್ತದಾನಿಗಳಿಗೆ ಸನ್ಮಾನ...

ಕರ್ನಾಟಕ ರಾಜ್ಯ ಎನ್.ಪಿ.ಎಸ್. ನೌಕರರ ಸಂಘ ಬೆಂಗಳೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಆ.17ರಂದು ಬೆಂಗಳೂರಿನಲ್ಲಿ ನಡೆದ ನಮ್ಮಭಿಮಾನ ಅಭಿನಂದನಾ ಸಮಾರಂಭದಲ್ಲಿ ನಡೆಯಿತು.ರಾಜ್ಯ ಘಟಕದ ಗೌರವಾಧ್ಯಕ್ಷ ರಾಗಿ ರಮೇಶ್ ಸಂಗಾ, ರಾಜ್ಯಾಧ್ಯಕ್ಷರಾಗಿ ನಾಗನಗೌಡ ಎಂ.ಎ., ಉಪಾಧ್ಯಕ್ಷರುಗಳಾಗಿ ನಾರಾಯಣಸ್ವಾಮಿ, ಪೃಥ್ವಿ ಕುಮಾರ್ ಟಿ., ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಚಂದ್ರಶೇಖರ ಎಂ.ಆರ್. ಆಯ್ಕೆಯಾದರು.

ಮಡಪ್ಪಾಡಿ ಗ್ರಾಮದ ಶೆಟ್ಟಿಮಜಲು ಚೈತನ್ಯ ಗೆಳೆಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ದೀಕ್ಷಿತ್ ಶೆಟ್ಟಿಮಜಲು, ಕಾರ್ಯದರ್ಶಿಯಾಗಿ ಶೇಷಪ್ಪ ಶೆಟ್ಟಿಮಜಲು ಆಯ್ಕೆಯಾದರು.

ಕರ್ನಾಟಕ ರಾಜ್ಯ ಎನ್.ಪಿ.ಎಸ್. ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪೃಥ್ವಿ ಕುಮಾರ್ ಟಿ. ಆಯ್ಕೆಯಾಗಿದ್ದಾರೆ. ಆ.17ರಂದು ಬೆಂಗಳೂರಿನಲ್ಲಿ ನಡೆದ ನಮ್ಮಭಿಮಾನದ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಪೃಥ್ವಿಕುಮಾರ್ ರವರು ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ

ಸನಾತನ ಕಾಲದಿಂದಲೂ ಆದ್ಯಾತ್ಮಿಕ ನೆಲೆಯಲ್ಲಿ ಪರಿಸರ ಸಂರಕ್ಷಣೆ ಮಾಡಿಕೊಂಡು ಬಂದಿರುವ ನಮ್ಮ ನೆಲ-ಜಲದ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ವತಿಯಿಂದ ಆ.20 ರಂದು ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟದ ಬಳಿ ನದಿ ಪೂಜನ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ, ಪ್ರಮುಖರಾದ...

ಮೆಸ್ಕಾಂನ ನಿವೃತ್ತ ಅಧಿಕಾರಿ ಕೆದಂಬಾಡಿ ಚಂದ್ರಶೇಖರ್ ರವರ ಧರ್ಮಪತ್ನಿ ವೇದಾವತಿ ಯುವರು ಇಂದು ( ಆ.21) ಮುಂಜಾನೆ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಇಂಗ್ಲೆಂಡ್ ನಲ್ಲಿ ನೆಲೆಸಿರುವ ತೇಜಸ್ವಿ, ಮಂಗಳೂರಿನಲ್ಲಿ ನರರೋಗ ತಜ್ಞರಾಗಿರುವ ಡಾ.ರಕ್ಷಿತ್ ಕೆದಂಬಾಡಿ, ಅಮೇರಿಕಾದಲ್ಲಿ ನೆಲೆಸಿರುವ ಮಗಳು ಸೌರಭ ರನ್ನು ಅಗಲಿದ್ದಾರೆ.ಮೃತರು ಅಂತ್ಯಕ್ರಿಯೆ ನಾಳೆ ಸುಳ್ಯದ ವಿಮುಕ್ತಿ ಧಾಮದಲ್ಲಿ...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ 2023-24 ನೇ ಸಾಲಿನ ವಾಣಿಜ್ಯ ಪದವಿಯ 6ನೇ ಸೆಮಿಸ್ಟರ್ ಪರೀಕ್ಷೆಗೆ ಒಟ್ಟು 102 ವಿದ್ಯಾರ್ಥಿಗಳು ಹಾಜರಾಗಿದ್ದು, 96 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇಕಡ 94 ಫಲಿತಾಂಶವನ್ನು ಪಡೆದಿರುತ್ತದೆ. ಕು. ಮನು ಕೆ 99.38 ಶೇಕಡಾವನ್ನು ಪಡೆದಿರುತ್ತಾಳೆ. ವಾಣಿಜ್ಯ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 01...

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು, ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸುತ್ತಿರುವ ರಾಜ್ಯಪಾಲರ ವಿರುದ್ಧ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಪಾದಯಾತ್ರೆಯು ಕಲ್ಲುಗುಂಡಿಯ ಮುಖ್ಯ ಪೇಟೆಯಲ್ಲಿ (ಆ 20)ರಂದು...

All posts loaded
No more posts