Ad Widget

ಸುಳ್ಯ :- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸುಜ್ಞಾನ ನಿಧಿ ಶಿಷ್ಯ ವೇತನ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವತಿಯಿಂದ ಸುಜ್ಞಾನ ನಿಧಿ ಶಿಷ್ಯ ವೇತನ ವಿತರಣಾ ಕಾರ್ಯಕ್ರಮವು ಸುಳ್ಯ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಸುರೇಶ ಕಣೆಮರಡ್ಕರವರ ಅಧ್ಯಕ್ಷತೆಯಲ್ಲಿ ಕೆ ವಿ ಜಿ ತಾಂತ್ರಿಕ ಮಹಾವಿದ್ಯಾಲಯ ಸಭಾಂಗಣದಲ್ಲಿ ನಡೆಯಿತು.ಈ ಕಾರ್ಯಕ್ರಮವನ್ನು ಸುಳ್ಯ ಕುರುಂಜಿಭಾಗ್ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ (ರಿ) ಕಮಿಟಿ ಬಿ ಅಧ್ಯಕ್ಷರಾದ ಡಾ|| ರೇಣುಕಾಪ್ರಸಾದ್ ಕೆ ವಿ ರವರು ದೀಪವನ್ನು ಪ್ರಜ್ವಲಿಸುವ ಮುಖೇನ ಚಾಲನೆಯನ್ನು ನೀಡಿದರು.ಈ ಕಾರ್ಯಕ್ರಮದಲ್ಲಿ ಶ್ರೀ. ಕ್ಷೇ. ಧ. ಗ್ರಾ. ಯೋಜನೆಯ ಉಡುಪಿ ಕರಾವಳಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೇ ಗೌಡರವರು ಮಾತನಾಡುತ್ತಾ, ಯೋಜನೆಯ ಹುಟ್ಟು, ಬೆಳೆದು ಬಂದ ದಾರಿ, ಬೆಳವಣಿಗೆಯಾದ ಬಗ್ಗೆ ವಿವರಿಸಿ, ಸಾಮಾನ್ಯ ಕಟ್ಟಕಡೆಯ ವ್ಯಕ್ತಿ ಸ್ವಾಭಿಮಾನ ಜೀವನದ ಮೂಲಕ ಮುಖ್ಯವಾಹಿನಿಗೆ ಬರಬೇಕು ಎಂಬ ಧ್ಯೇಯ ಉದ್ದೇಶ ಯೋಜನೆಯದಾಗಿದೆ. ಯೋಜನೆಯಲ್ಲಿ ಕೃಷಿಗೆ ಪೂರಕವಾಗಿ ಕೃಷಿ ಕಾರ್ಯಕ್ರಮಗಳು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಶಿಕ್ಷಣಕ್ಕೆ ಸಂಬಂಧ ಪಟ್ಟ ಕಾರ್ಯಕ್ರಮಗಳು, ಆಪತ್ತು ಬಂದಾಗ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮ, ಜನಜಾಗೃತಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.ಮನುಷ್ಯ ಹುಟ್ಟಿನಿಂದ ಸಾಯುವುವ ತನಕದ ಎಲ್ಲಾ ರೀತಿಯ ಕಾರ್ಯಕ್ರಮವನ್ನು ಅನುಷ್ಠಾನ ಮಾಡಿಕೊಂಡು ಬಂದಿದೆ. ಇಡೀ ವಿಶ್ವದ ಕಣ್ಣನ್ನು ತೆರಿಸಿ ಕೊಡುವ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಮಾಡಿಕೊಡಲಾಗಿದೆ. ತಾಲೂಕಿನಲ್ಲಿ ಈಗಾಗಲೇ 250 ಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಗೆ ಸುಮಾರು 40 ಲಕ್ಷ ಮೊತ್ತದ ಶಿಷ್ಯ ವೇತನ ವಿತರಿಸಲಾಗಿದೆ. ಇದರ ಸದ್ಬಳಕೆ ವಿದ್ಯಾರ್ಥಿಗಳು ಸಮರ್ಪಕವಾಗಿ ನಿರ್ವಹಿಸಬೇಕೆಂಬುದು ಪೂಜ್ಯರ ಆಶಯವಾಗಿದೆ ಎಂದು ಹೇಳಿದರು.ಈ ಕಾರ್ಯಕ್ರಮದಲ್ಲಿ ಸುಳ್ಯದ ಕುರುಂಜಿಭಾಗ್ ಕೆ ವಿ ಜಿ ಸಮೂಹ ವಿದ್ಯಾ ಸಂಸ್ಥೆಯ ಕಮಿಟಿ ಬಿ ಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರಾದ ಡಾ || ಉಜ್ವಲ್ ಯು ಜೆ ರವರು ಮಾತನಾಡುತ್ತಾ, ಸರಕಾರದ ಮೂಲಕ ಮಾಡಬೇಕಾದ ಕೆಲವೊಂದು ಕಾರ್ಯವನ್ನು ಧರ್ಮಸ್ಥಳ ಯೋಜನೆ ಪೂರೈಸುತ್ತಿದೆ. ಶಿಕ್ಷಣದ ವ್ಯವಸ್ಥೆಗೆ ಪೂರಕವಾಗಿ ಸುಜ್ಞಾನ ನಿಧಿ ಶಿಷ್ಯ ವೇತನ ನೀಡುವುದರದೊಂದಿಗೆ ವಿದ್ಯಾರ್ಥಿಗಳು ತಮ್ಮ ಸದೃಢ ಭವಿಷ್ಯವನ್ನು ರೂಪಿಸಿಕೊಳ್ಳಲು ಪ್ರೇರಣೆಯಾಗಿ ಕೈ ಜೋಡಿಸಿರುವುದು ಶ್ಲಾಘನೀಯ. ಇತ್ತೀಚಿನ ದಿನಗಳಲ್ಲಿ ಪ್ರಾತ್ಯಕ್ಷಿಕೆಯ ಮುಖೇನ ಶಿಕ್ಷಣ ನೀಡುತ್ತಿದ್ದು, ಇದಕ್ಕೆ ಪೂರಕವಾಗಿ ಧರ್ಮಸ್ಥಳ ಯೋಜನೆ ಶಿಕ್ಷಣಕ್ಕಾಗಿ ತರಬೇತಿಗಳನ್ನು ನೀಡಿ ಬ್ಯಾಂಕ್ ಗಳಿಂದ ಸಾಲಗಳನ್ನು ಒದಗಿಸಿ ಅವರನ್ನು ಸ್ವಾವಲಂಬಿಗಳಾಗಿ ಮಾಡುವಲ್ಲಿ ಉತ್ತಮವಾದ ಕೆಲಸವನ್ನು ಮಾಡುತ್ತಿದೆ. ವಿದ್ಯಾರ್ಥಿಗಳು ಪೋಷಕರಿಗೆ, ಹಿರಿಯರಿಗೆ, ಗುರುಗಳಿಗೆ ಗೌರವ ಕೊಡುವ ಅಭ್ಯಾಸವನ್ನು ಇಟ್ಟುಕೊಳ್ಳಬೇಕು ಎಂದು ಹೇಳಿದರು.

. . . . . . .

ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿಯವರಾದ ಶ್ರೀ ರಾಜಣ್ಣರವರು, ಸುಳ್ಯ ತಾಲೂಕಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯದರ್ಶಿರವರಾದ ಶಿಕ್ಷಣ ಸಂಯೋಜಕರಾದ ಶ್ರೀಮತಿ ಧನಲಕ್ಷಿರವರು, ಸುಳ್ಯ ಪಟ್ಟಣ ಪಂಚಾಯತ್ ನ ಮುಖ್ಯಾಧಿಕಾರಿಯವರಾದ ಶ್ರೀ ಎಮ್ ಎಚ್ ಸುಧಾಕರ್ ರವರು, ಸುಳ್ಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷರಾದ ಶ್ರೀ ಲೋಕನಾಥ ಅಮೆಚೂರುರವರು, ದಕ್ಷಿಣ ಕನ್ನಡ ಜಿಲ್ಲೆಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಎನ್ ಎ ರಾಮಚಂದ್ರರವರು, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನ ನಿಕಟ ಪೂರ್ವ ರಾಜ್ಯಾಧ್ಯಕ್ಷರಾದ ಶ್ರೀ ಬಾಲಕೃಷ್ಣ ಪುತ್ಯರವರು, ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಬಿ ಸಿ ಟ್ರಸ್ಟ್ (ರಿ) ದಕ್ಷಿಣ ಕನ್ನಡ 2 ರ ಜಿಲ್ಲಾ ನಿರ್ದೇಶಕರಾದ ಶ್ರೀ ಪ್ರವೀಣ್ ಕುಮಾರ್ ರವರು, ಸುಳ್ಯದ ವಕೀಲರ ಸಂಘದ ಅಧ್ಯಕ್ಷರಾದ ಬಿ ಎ ಎಲ್ ಬಿ ನ್ಯಾಯವಾದಿರವರಾದ ಶ್ರೀ ಸುಕುಮಾರ್ ಕೋಡ್ತುಗುಳಿರವರು, ಸುಳ್ಯದ ಕುರುಂಜಿಭಾಗ್ ಕೆ ವಿ ಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಪ್ರಾಂಶುಪಾಲರಾದ ಡಾ || ಸುರೇಶ್ ರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ವೃತ್ತಿಪರ ಶಿಕ್ಷಣವನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರವನ್ನು ವಿತರಣೆ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು, ಎಲ್ಲಾ ಒಕ್ಕೂಟಗಳ ಅಧ್ಯಕ್ಷರುಗಳು, ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಭಜನಾ ಪರಿಷತ್ ನ ಪದಾಧಿಕಾರಿಗಳು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು, ಮೇಲ್ವಿಚಾರಕರ ಶ್ರೇಣಿಯ ಕಾರ್ಯಕರ್ತರು, ಕಛೇರಿ ಸಿಬ್ಬಂದಿಗಳು ಭಾಗವಹಿಸಿದರು.ಈ ಸಂದರ್ಭದಲ್ಲಿ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಯವರಾದ ಮಾಧವ ಗೌಡರವರು ಸ್ವಾಗತಿಸಿದರು. ಕಛೇರಿ ಹಣಕಾಸು ಪ್ರಬಂಧಕರಾದ ಅತೀಶ್ ರವರು ಧನ್ಯವಾದವಿತ್ತರು. ಕಛೇರಿ ಸಹಾಯಕರಾದ ಅಮಿತ್ ರವರು ಕಾರ್ಯನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!