
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಗುತ್ತಿಗಾರು, ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಆಗಸ್ಟ್ 22ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿ ಇಲ್ಲಿ ನಡೆದಿದ್ದು ಸ.ಹಿ.ಪ್ರಾ.ಶಾಲೆ ವಳಲಂಬೆ ಇಲ್ಲಿಯ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸಮಗ್ರ ದ್ವಿತೀಯ ಹಾಗೂ ಕಿರಿಯ ಮತ್ತು ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸಮಗ್ರ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.