ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ ಇವರ ವತಿಯಿಂದ ಆ.23ರಂದು ಸುಳ್ಯದ ಶ್ರೀ ಚೆನ್ನಕೇಶವ ವೃತ್ತದ ಬಳಿ ಇರುವ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಕಾನೂನು ಸೇವೆಗಳ ಸಮಿತಿ ಸುಳ್ಯ ಇದರ ಪ್ಯಾನಲ್ ವಕೀಲರಾದ ಎಂ ಎಂ ಬೊಳ್ಳಪ್ಪ ಇವರು ಮೋಟಾರು ವಾಹನ ಕಾಯ್ದೆ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸುಳ್ಯ ವಕೀಲರ ಸಂಘದ ಕಾರ್ಯದರ್ಶಿ ಜಗದೀಶ್ ಡಿ ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ನಿಲಯದ ಸಿಬ್ಬಂದಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
- Tuesday
- December 3rd, 2024